ಮಾಧ್ಯಮ ಅಕಾಡೆಮಿಯಿಂದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

Date:

Advertisements

ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.

ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., 25,000/- ರೂ. ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.

ಇದನ್ನು ಓದಿದ್ದೀರಾ? ಹಾವೇರಿ | ವಿಚಿತ್ರ ಘಟನೆ; ಬಾಲಕನ ಮುಖದ ಮೇಲಿನ ಗಾಯಕ್ಕೆ ಹೊಲಿಗೆ ಬದಲು ‘ಫೆವಿಕ್ವಿಕ್’ ಹಾಕಿದ ನರ್ಸ್!

Advertisements

ಸ್ಪರ್ಧೆಯ ಷರತ್ತುಗಳು ಹೀಗಿದೆ:

  1. ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :01-01-2024 ರಿಂದ 31-01-2025ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.
  2. ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.
  3. ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.
  4. ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು.
  5. ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನುJPEG format ನಲ್ಲಿ ಮಾತ್ರ ಸಲ್ಲಿಸಬೇಕು.
  6. ಪ್ರದರ್ಶನಕ್ಕೆಆಯ್ಕೆಯಾಗುವ ಛಾಯಾಚಿತ್ರಗಳನ್ನು20”x 30” ಅಳತೆಯಲ್ಲಿಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್ ಗಳು 20”x 30” ಅಳತೆಯ , 300 DPI ನಲ್ಲಿದ್ದು ಕನಿಷ್ಠ 5 MB ಗಾತ್ರದಲ್ಲಿರಬೇಕು.
  7. ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನುಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.
  8. ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನುತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.
  9. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್‌ಸೈಟ್‌ನಲ್ಲಿರುವ ನಿಗದಿತ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿಮಾಡಿ, ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್‌ಗಳನ್ನು photo.karnatakamediaacademy@gmail.com ಇ-ಮೇಲ್ ವಿಳಾಸಕ್ಕೆ ದಿನಾಂಕ: 15-02-2025 ರಂದು ಸಂಜೆ 5:00 ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
  10. ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆ ಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದು, ಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.
  11. ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ.35,000/ ದ್ವಿತೀಯ ಬಹುಮಾನ: ರೂ. 25000, ಹಾಗೂ ತೃತೀಯ ಬಹುಮಾನ: ರೂ.15,000ಗಳನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9448227768 ಹಾಗೂ 9449245980 ನ್ನು ಸಂಪರ್ಕಿಸಬಹುದು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X