ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಸಂಘದಿಂದ ಶಿವಮೊಗ್ಗ ನಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ರಾಜ್ಯಾಧ್ಯಕ್ಷ ಪದ್ಮಪ್ರಭ ಇಂದ್ರ ಮಾತನಾಡಿ, ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 4,659ಕ್ಕೂ ಅಧಿಕ ಮಂದಿ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಮಾಸಿಕ ₹12,000 ವೇತನ ನೀಡಲಾಗುತ್ತಿದ್ದು, ಈ ವೇತನವು ಕುಟುಂಬ ನಿರ್ವಹಣೆಗೆ ಸಾಕಾಗುವುದಿಲ್ಲ. ಆದ್ದರಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ₹30,000ಕ್ಕೆ ಹೆಚ್ಚಳ ಮಾಡುವಂತೆ ಆಗ್ರಹಿಸಿದರು.
“ಹಲವು ವರ್ಷಗಳಿಂದ ಅನೇಕ ಹೋರಾಟಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ಮುಂಬರುವ ಬಜೆಟ್’ನಲ್ಲಿ ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಳ ಮಾಡುವ ಕುರಿತು ಅನುದಾನವನ್ನು ಒದಗಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ
ಮಹೇಶ, ರಾಜೇಶ್ ಭಟ್, ಎಸ್ ಜಿ ನಾಗರತ್ನ, ಅಶ್ವಿನಿ, ವಿ ಎನ್ ರಾಜಶೇಖರ, ಬೈರೆಗೌಡ, ಸುಧೀರ್ ಕುಮಾರ್, ಜಗದೀಶ, ಸುಲತಾ, ತಾರಾಸಿಂಗ್, ಗುರುರಾಜ್, ಮಮತಾ, ನಿತ್ಯಾನಂದ, ಲೋಕೇಶ ಸೇರಿದಂತೆ ಇತರರು ಇದ್ದರು.