ಮೈಸೂರು | ಮನೆಯಲ್ಲಿ ಲಂಚ ಪಡೆಯುವ ವೇಳೆ ಸಿಕ್ಕಿ ಬಿದ್ದ ಚೆಸ್ಕಾಂ ಎಂಜಿನಿಯರ್

Date:

ಒಂದೇ ದಿನ ಪ್ರತ್ಯೇಕ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಎಂಜಿನಿಯರ್‌ಗಳು ಬಂಧನಕ್ಕೆ ಒಳಗಾಗಿದ್ದು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಚಾರ್ಜಿಂಗ್ ಪಾಯಿಂಟ್‌ಗೆ ಅನುಮತಿ ನೀಡಲು ಕುಶಾಲನಗರ ಎಇಇ ಸೇರಿದಂತೆ ಶಾಲಾ ಕಟ್ಟಡ ಕಾಮಗಾರಿಗೆ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಚೆಸ್ಕಾಂ ಎಇಇ ಅಶೋಕ್ ಕುಮಾರ್ 2 ಲಕ್ಷ ಲಂಚ ಪಡೆಯವ ವೇಳೆ ಲಾಕ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

49 ಕಿಲೋ ವ್ಯಾಟ್ ಚಾರ್ಜಿಂಗ್ ಪಾಯಿಂಟ್‌ಗೆ ಅನುಮತಿ ನೀಡಲು 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ಕುಶಾಲನಗರ ಎಇಇ ಅಶೋಕ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರಿನ ವಿಜಯನಗರ ನಿವಾಸದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸಾಕ್ಷಿ ಸಮೇತ ಲಾಕ್ ಮಾಡಿದ್ದಾರೆ.

ಇಬ್ಬರು ಎಂಜಿನಿಯರ್‌ ಲೋಕಾಯುಕ್ತ ಬಲೆಗೆ

ಶಾಲಾ ಕಟ್ಟಡ ಕಾಮಗಾರಿಗೆ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಚಾಮರಾಜನಗರ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಚಾಮರಾಜನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್ ಮಧುಸೂದನ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆಂಪರಾಜು ಅವರು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

“ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡದ ಕಾಮಗಾರಿಯನ್ನು ಸೂರ್ಯ ಬಿಲ್ಡರ್‌ನ ಸುನೀಲ್‌ಕುಮಾರ್ ಎಂಬ ಗುತ್ತಿಗೆದಾರರು ನಿರ್ವಹಿಸಿದ್ದರು. ಈ ಕಾಮಗಾರಿಯ ಬಿಲ್ ಹಣವನ್ನು ಮಂಜೂರು ಮಾಡಿಕೊಡಲು ಇಬ್ಬರೂ ಅಧಿಕಾರಿಗಳು ಸುನೀಲ್ ಕುಮಾರ್ ಅವರಿಂದ 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶುಕ್ರವಾರ ಸಂಜೆ ಲಂಚ ಸ್ವೀಕರಿಸುವಾಗ ಇಬ್ಬರನ್ನೂ ಕುದೇರು ಗ್ರಾಮದ ಬಳಿ ವಶಕ್ಕೆ ಪಡೆಯಲಾಗಿದೆ” ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಮಾರ್ಗದರ್ಶನಲ್ಲಿ ಕಾರ್ಯಾಚರಣೆ ನಡೆದಿದೆ. ಡಿವೈಎಸ್‌ಪಿ ಪವನ್ ಕುಮಾರ್ ಇನ್ಸ್‌ಪೆಕ್ಟರ್ ಲೋಕೇಶ್ ಸೇರಿ ಹಲವು ಸಿಬ್ಬಂದಿ ಭಾಗಿಯಾಗಿದ್ದಾರೆ. 5 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದ ಅಧಿಕಾರಿ 2 ಲಕ್ಷ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...