ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023-24ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಬಂಜಾರ ನೃತ್ಯ ಕಸೂತಿ’ ಕ್ಷೇತ್ರದಲ್ಲಿ ಸಾಧನೆಗೈದ ಭಾಲ್ಕಿ ತಾಲ್ಲೂಕಿನ ಆಶಾ ರಾಠೋಡ್ ಅವರು ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ತಿನ ಮಹಿಳಾ ಘಟಕದ ಭಾಲ್ಕಿ ತಾಲ್ಲೂಕು ಅಧ್ಯಕ್ಷರಾದ ಆಶಾಬಾಯಿ ರಾಥೋಡ್ ಅವರು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ದೇಶದ ವಿವಿಧ ರಾಜ್ಯಗಳಲ್ಲಿ ಜರುಗಿದ ಜನಪದ ಉತ್ಸವ, ಲಂಬಾಣಿ ಉತ್ಸವಗಳಲ್ಲಿ ಲಂಬಾಣಿ ಕಲಾ ತಂಡದೊಂದಿಗೆ ಭಾಗವಹಿಸಿ ಕಲಾ ಪ್ರದರ್ಶನ ಮಾಡಿದ್ದಾರೆ.
ಮಹಿಳೆಯರಿಗೆ ಲಂಬಾಣಿ ಕಸೂತಿ ತರಬೇತಿ ನೀಡುವ ಮುಖಾಂತರ ಗಡಿ ಭಾಗದಲ್ಲಿ ಲಂಬಾಣಿ ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯ ಮಾಡಿದ್ದಾರೆ. ಅವರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಭಾರತೀಯರೊಂದಿಗೆ ಅಮೇರಿಕಾ ಅಮಾನುಷ ವರ್ತನೆ : ಸಂಸದ ಸಾಗರ್ ಖಂಡ್ರೆ ಖಂಡನೆ
ಆಶಾದೇವಿ ರಾಠೋಡ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿದ್ದಕ್ಕೆ ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಹಾಗೂ ತಾಲೂಕು ಘಟಕ ಮತ್ತು ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ ನವದೆಹಲಿ ಪರವಾಗಿ ಡಾ.ಜಗನ್ನಾಥ ಹೆಬ್ಬಾಳೆ, ಡಾ.ರಾಜಕುಮಾರ ಹೆಬ್ಬಾಳೆ, ನಿಜಲಿಂಗಪ್ಪ ತಗಾರೆ, ಪ್ರೊ.ಎಸ್.ಬಿ.ಬಿರಾದಾರ, ಶಂಕ್ರೆಪ್ಪ ಹೊನ್ನಾ, ಡಾ.ಸಂಜೀವಕುಮಾರ ಜುಮ್ಮಾ, ಡಾ.ಸುನಿತಾ ಕೂಡ್ಲಿಕರ್, ಡಾ.ಮಹಾನಂದ ಮಡಕಿ, ಡಾ.ಸಾವಿತ್ರಿಬಾಯಿ ಹೆಬ್ಬಾಳೆ, ಎಸ್.ಬಿ.ಕುಚಬಾಳ, ಶಿವಶರಣಪ್ಪ ಗಣೇಶಪುರ, ಪ್ರಕಾಶ ಕನ್ನಾಳೆ, ಮಹಾರುದ್ರ ಡಾಕುಳಗಿ, ಶಿವರಾಜ್ ಖಪಲೆ ಹರ್ಷ ವ್ಯಕ್ತಪಡಿಸಿದ್ದಾರೆ.