ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ತೀರ್ಪು ಇಂದು ಪ್ರಕಟ

Date:

Advertisements

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವಂತೆ ಕೋರಿರುವ ಅರ್ಜಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಗಳ ಆದೇಶಗಳು ಶುಕ್ರವಾರ (ಫೆ.7) ಧಾರವಾಡ ಪೀಠದಲ್ಲಿ ಪ್ರಕಟವಾಗಲಿವೆ.

ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಕೋರಿ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ಹಾಗೂ ತಮ್ಮ ಮೇಲಿನ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶವನ್ನು ಕಾಯ್ದಿರಿಸಿತ್ತು. ಶುಕ್ರವಾರ ಈ ಎರಡೂ ಅರ್ಜಿಗಳ ಆದೇಶಕ್ಕೆ ಪಟ್ಟಿ ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಮಣೀಂದ್ರ್ ಸಿಂಗ್, ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಸಿದ್ದರಾಮಯ್ಯ ಪತ್ನಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದಾರೆ.

Advertisements

ಪ್ರಕರಣ ಸಂಬಂಧ ಅರ್ಜಿದಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮುಡಾದಿಂದ ನಿವೇಶನಗಳನ್ನು ಅಕ್ರಮವಾಗಿ ಪಡೆದಿರುವ ಆರೋಪವಿದೆ. ಈಗಾಗಲೇ ಪ್ರಕರಣದ ತನಿಖೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ವಹಿಸಿದೆ. ಆದರೆ, ಸಿದ್ದರಾಮಯ್ಯ ರಾಜ್ಯದ ಹಾಲಿ ಮುಖ್ಯಮಂತ್ರಿ ಆಗಿದ್ದು, ರಾಜ್ಯ ಸರ್ಕಾರದ ಇಲಾಖೆಗಳ ಮೇಲೆ ಅದರಲ್ಲೂ ಮುಖ್ಯವಾಗಿ ಲೋಕಾಯುಕ್ತ ಮತ್ತು ಪೊಲೀಸ್ ಪ್ರಾಧಿಕಾರಗಳಂತಹ ತನಿಖಾ ಸಂಸ್ಥೆಗಳ ಮೇಲೆ ಭಾರೀ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಸ್ನೇಹಮಯಿ ಕೃಷ್ಣ ಕೋರಿದ್ದರು.

ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅರ್ಜಿ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದರು. ಬಿ.ಎಸ್. ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್​ ಹಾಗೂ ಸರ್ಕಾರದ ಪರ ಹಿರಿಯ ವಕೀಲ ಪ್ರೋ. ರವಿವರ್ಮ ಕುಮಾರ್ ವಾದ ಮಂಡಿಸಿದ್ದರು.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು.

ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X