ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ನ್ಯಾಯಾಲಯ

Date:

Advertisements

ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಕೃಷಿ ಭೂಮಿಯ ಅನುದಾನವನ್ನು ರದ್ದುಗೊಳಿಸಿ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯ ಆದೇಶ ಹೊರಡಿಸಿದೆ.

ಮೈಸೂರು ಭೂ ಮಂಜೂರಾತಿ ನಿಯಮಗಳು, 1969 ರ ಅಡಿಯಲ್ಲಿ 1972ರಲ್ಲಿ ಹರ್ಷೇಂದ್ರ ಅವರಿಗೆ ಭೂಮಿಯನ್ನು ನೀಡಲಾಗಿತ್ತು. ಆಗ ಸಲ್ಲಿಸಿದ ಅಫಿಡವಿಟ್‌ನಲ್ಲಿ, ವಾರ್ಷಿಕ 1,200 ರೂ. ಆದಾಯವಿರುವ ‘ಭೂರಹಿತ’ ಎಂದು ಗುರುತಿಸಿಕೊಂಡಿದ್ದ ಹರ್ಷೇಂದ್ರ, ಪಿತ್ರಾರ್ಜಿತವಾಗಿ ಅಥವಾ ಸ್ವಯಂ ಸಂಪಾದಿಸಿರುವ ಯಾವುದೇ ಸ್ವಂತ ಆಸ್ತಿ ಹೊಂದಿಲ್ಲ ಎಂದು ಹೇಳಿಕೊಂಡಿದ್ದರು. ಇದರಿಂದಾಗಿ ಭೂರಹಿತರಿಗೆ ಸರ್ಕಾರದ ನಿಬಂಧನೆಗಳ ಅಡಿಯಲ್ಲಿ ಭೂಮಿಗೆ ಅರ್ಹರಾಗಿದ್ದೇವೆ ಎಂದು ಮಾಹಿತಿ ನೀಡಿದ್ದರು.

ಭೂ ಮಂಜೂರಾತಿಯನ್ನು ಬೆಳ್ತಂಗಡಿಯ ನಾಗರಿಕ ಸೇವಾ ಟ್ರಸ್ಟ್‌ನ ಕೆ ಸೋಮನಾಥ ನಾಯಕ್ ಅವರು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ 2015ರಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿ, ಹರ್ಷೇಂದ್ರ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಅವರು ತಮ್ಮ ಹೆಸರಿನಲ್ಲಿ ಯಾವುದೇ ಜಮೀನು ಹೊಂದಿಲ್ಲ, ಎಸಿ ನ್ಯಾಯಾಲಯಕ್ಕೆ ಈ ಬಗ್ಗೆ ವಿಚಾರಣೆ ಮಾಡುವ ಅಧಿಕಾರವಿಲ್ಲ ಎಂದು ಪುನರುಚ್ಚರಿಸಿದ್ದರು.

Advertisements

ಇದನ್ನು ಓದಿದ್ದೀರಾ? ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

ಹರ್ಷೇಂದ್ರ ಕುಮಾರ್ ಹೆಗಡೆ ಅವರು ಸಾಕಷ್ಟು ಜಮೀನು ಹೊಂದಿರುವವರಲ್ಲ ಮತ್ತು ಅವರು ಭೂಮಿಯನ್ನು ಪಡೆಯಲು ಅರ್ಹರಾಗಿದ್ದಾರೆ ಎಂಬ ಅರ್ಜಿದಾರರ ಮನವಿಯನ್ನು ಪರಿಶೀಲಿಸುವಂತೆ 2022ರಲ್ಲಿ ರಿಟ್ ಅರ್ಜಿಯನ್ನು ವಿಲೇವಾರಿ ಮಾಡುವಾಗ, ಎಸಿ ಕೋರ್ಟಿಗೆ ಕರ್ನಾಟಕ ಹೈಕೋರ್ಟ್‌ ನಿರ್ದೇಶನ ನೀಡಿತ್ತು.

2012ರಲ್ಲಿ ವೀರೇಂದ್ರ ಹೆಗ್ಗಡೆ ಅವರು ತಮ್ಮ ಅವಿಭಜಿತ ಕುಟುಂಬದಲ್ಲಿ (ಹರ್ಷೇಂದ್ರ ಸೇರಿದಂತೆ) 4,671.06 ಎಕರೆ ಹೊಂದಿತ್ತು. ಆದರೆ ಕರ್ನಾಟಕ ಭೂಸುಧಾರಣಾ ಕಾಯ್ದೆ ಜಾರಿಯಾದ ನಂತರ 71.050 ಎಕರೆ ಜಮೀನು ಹೊಂದಿದ್ದಾರೆ. ಹೀಗಾಗಿ ಭೂ ಮಂಜೂರಾತಿ ರದ್ದುಗೊಳಿಸುವಂತೆ ಎಸಿ ನ್ಯಾಯಾಲಯದಲ್ಲಿ ನಾಗರಿಕ ಸೇವಾ ಟ್ರಸ್ಟ್‌ನ ಕೆ ಸೋಮನಾಥ ನಾಯಕ್ ಮನವಿ ಮಾಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X