ದಾವಣಗೆರೆ | ಶಿಕ್ಷಣಕ್ಕೆ ಯಾವುದೇ ಧರ್ಮ, ಜಾತಿ, ಪಂಥ, ಪಕ್ಷ ಭೇದವಿಲ್ಲ: ಮಧು ಬಂಗಾರಪ್ಪ

Date:

Advertisements

ಶಿಕ್ಷಣವೇ ಶಕ್ತಿ. ಶಿಕ್ಷಣಕ್ಕೆ ಯಾವುದೇ ಧರ್ಮ, ಜಾತಿ, ಪಂಥ, ಪಕ್ಷ ಭೇದವಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚಂಗಿಪುರ ಗ್ರಾಮದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ”ಯ ನೂತನ ಸುಸುಜ್ಜಿತ ಭವ್ಯವಾದ ಶಾಲಾ ಕಟ್ಟಡವನ್ನು ಲೋಕಾರ್ಪಣೆ ಮಾಡಿದ ಸಂದರ್ಭದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಅವರು ತಮ್ಮ ಹುಟ್ಟೂರಿನ ಸರ್ಕಾರಿ ಶಾಲೆಯನ್ನು ದತ್ತು ಪಡೆದು ವಿವಿಧ ಅನುದಾನಗಳನ್ನು ಬಳಸಿಕೊಂಡು ಸುಮಾರು ₹3.5 ಕೋಟಿ ವೆಚ್ಚದಲ್ಲಿ ಭವ್ಯವಾದ ಹಾಗೂ ಸಕಲ ಸವಲತ್ತುಗಳನ್ನು ಒಳಗೊಂಡ ಶಾಲೆಯನ್ನು ನಿರ್ಮಿಸಿದ್ದಾರೆ” ಎಂದರು.

Advertisements

ರವಿಕುಮಾರ್ ಮಾತನಾಡಿ, ʼನಮ್ಮ ಶಾಲೆ ನಮ್ಮ ಜವಾಬ್ದಾರಿʼ ಎಂಬ ವಿನೂತನ ಯೋಜನೆಗೆ ಪುಷ್ಠಿನೀಡಿ ಶಕ್ತಿ ತುಂಬಿದಂತಾಗಿದೆ. ಇಂತಹ ಕಾರ್ಯಗಳು ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದರು.

ಅನಕ್ಷರತೆ ತಾಂಡವಾಡುತ್ತಿರುವ ಗ್ರಾಮದಲ್ಲಿರುವ ಬಡಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬುದು ನಮ್ಮ ಸರ್ಕಾರದ ದೃಷ್ಟಿಕೋನವಾಗಿದೆ ಎಂದ ಮಧು ಬಂಗಾರಪ್ಪ, 8ನೇ ತರಗತಿಯನ್ನು ಪ್ರಾರಂಭಿಸುವುದಾಗಿ ಘೋಷಿಸಿದರು.

“ಗುಣಾತ್ಮಕ ಶಿಕ್ಷಣ ನೀಡುವ ದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ಇನ್ನಷ್ಟು ಒತ್ತುನೀಡಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಹಿಂದುಳಿದ ಸಮುದಾಯಕ್ಕೆ ನರೇಗಾ ಯೋಜನೆಯಿಂದ ಆಶ್ರಯ: ತಾ.ಪಂ. ಇಒ ರಾಮು

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ ಎಂ, ವಿಧಾನಪರಿಷತ್ ಸದಸ್ಯ ಚಿದಾನಂದ ಎಂ ಗೌಡ, ಎಸ್ ವಿ ಸಂಕನೂರು, ಸ್ಥಳೀಯ ಶಾಸಕ ಬಿ ದೇವೇಂದ್ರಪ್ಪ, ಉಪನಿರ್ದೇಶಕ ಜಿ ಕೊಟ್ರೇಶ್ ಸೇರಿದಂತೆ ಜನಪ್ರತಿನಿಧಿಗಳು, ಮುಖಂಡರು, ಶಾಲಾ ಸಿಬ್ಬಂದಿ ವರ್ಗ, ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X