ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯುತವಾಗಿ ಮತದಾನ ಮಾಡುವುದು ಅತ್ಯಗತ್ಯವಾಗಿದೆ ಎಂದು ಇಎಲ್‌ಸಿ ನೋಡಲ್ ಅಧಿಕಾರಿ ಚಿದಾನಂದ್ ಅನೂರ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಂದಿದ ಎನ್ ಎಸ್ ಎಸ್ ಕೋಶ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮಹಿಳಾ ವಿವಿ ಸ್ವೀಪ್ ಸಮಿತಿ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ “ಸ್ವಚ್ಛತಾ ಮತ್ತು ಮತದಾನದ” ಅರಿವು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಪ್ರಸ್ತುತದ ಯುವಜನತೆ ದೇಶದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ. ಆದ್ದರಿಂದ ಅವರಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಅರ್ಥಮಾಡಿಸುವುದು ಅವಶ್ಯಕವಾಗಿದೆ. ಶಾಲಾ-ಕಾಲೇಜುಗಳಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮಗಳು, ಬೀದಿ ನಾಟಕಗಳು, ಸಾರ್ವಜನಿಕ ಭಾಷಣಗಳು ಮತ್ತು ಸಾಮಾಜಿಕ ಮಾಧ್ಯಮದ ಬಳಕೆಯ ಮೂಲಕ ಮತದಾನದ ಮಹತ್ವವನ್ನು ಬೋಧಿಸುವುದು ಪ್ರಭಾವಶಾಲಿಯಾಗಬಹುದು” ಎಂದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಕಾಡಾನೆ ದಾಳಿ; ಕಾರ್ಮಿಕ ಮಹಿಳೆ ಸಾವು
ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಎಚ್ ಎಂ ಚಂದ್ರಶೇಖರ ಮಾತನಾಡಿ, “ಯುವಜನತೆ ದಾರಿತಪ್ಪುವ ಪ್ರಮುಖ ಕಾರಣಗಳು ತಾಂತ್ರಿಕ ಪ್ರಭಾವ, ನಿರುದ್ಯೋಗ ಮತ್ತು ಜಾಗೃತಿಯ ಕೊರತೆ, ಇದನ್ನು ತಡೆಯಲು ಶಾಲಾ-ಕಾಲೇಜುಗಳಲ್ಲಿ ಮತದಾನದ ಮಹತ್ವ ಮತ್ತು ನೈತಿಕ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಒಂದು ವೋಟು ದೇಶದ ಭವಿಷ್ಯ ರೂಪಿಸುವ ಶಕ್ತಿ ಹೊಂದಿದೆ. ಅದನ್ನು ಜವಾಬ್ದಾರಿಯಿಂದ ಬಳಸಿ, ಉತ್ತಮ ನಾಯಕರನ್ನು ಆಯ್ಕೆ ಮಾಡೋಣ” ಎಂದು ಕರೆ ನೀಡಿದರು.