ಬೀದರ್ | ಮದುವೆ ಪ್ರಸ್ತಾಪ ನಿರಾಕರಿಸಿದ ಮಗಳು : ಹಗ್ಗದಿಂದ ಕತ್ತು ಬಿಗಿದು ಮಗಳ ಕೊಂದ ತಂದೆ

Date:

Advertisements

ಕುಟುಂಬದವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದಕ್ಕೆ ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕತ್ತು ಬಿಗಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಔರಾದ್ ತಾಲ್ಲೂಕಿನ‌ ವಡಗಾಂವ ಸಮೀಪದ ಬರಗೇನ್ ತಾಂಡಾದಲ್ಲಿ ಶುಕ್ರವಾರ (ಫೆ.7)‌ ರಂದು ಘಟನೆ ನಡೆದಿದ್ದು, ಮೋನಿಕಾ ಮೋತಿರಾಮ ಜಾಧವ (18) ಕೊಲೆಗೀಡಾದ ಯುವತಿ. ಮಗಳ ಕೊಂದ ತಂದೆ ಮೋತಿರಾಮ ಜಾಧವ ಆರೋಪಿಯಾಗಿದ್ದಾನೆ. ಕೊಲೆ ಆರೋಪಿ ಪತ್ತೆಗೆ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ.

ʼಕುಟುಂಬಸ್ಥರು ತೋರಿಸಿದ ಯುವಕನೊಂದಿಗೆ ಮದುವೆ ಮಾಡಿಕೊಳ್ಳಲು ಯುವತಿಗೆ ಇಷ್ಟ ಇರಲಿಲ್ಲ. ತಾನು ಬೇರೊಬ್ಬ ಯುವಕನೊಂದಿಗೆ ಪ್ರೀತಿ ಮಾಡುತ್ತಿರುವುದಾಗಿ ಹೇಳಿದ್ದಳು. ಈ ಸಂಬಂಧ ಮಗಳೊಂದಿಗೆ ಜಗಳವಾಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಪದಲ್ಲಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಹಗ್ಗದಿಂದ ಕತ್ತು ಬಿಗಿದು ಮಗಳನ್ನು ಕೊಂದು ಪರಾರಿಯಾಗಿದ್ದಾನೆʼ ಎಂದು ಪೊಲೀಸರು ತಿಳಿಸಿದ್ದಾರೆ.

Advertisements
WhatsApp Image 2025 02 08 at 8.40.14 AM 1
ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್, ಸಂತಪೂರ ಪಿಎಸ್ಐ ನಂದಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X