ದೆಹಲಿ ಚುನಾವಣೆ | ನಿಮ್ಮೊಳಗೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ: ಒಮರ್ ಅಬ್ದುಲ್ಲಾ

Date:

Advertisements

ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಎಎಪಿ ಘಟಾನುಘಟಿ ನಾಯಕರಾದ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್, ಮನಿಷ್ ಸಿಸೋಡಿಯಾ ಸೋಲುಂಡಿದ್ದಾರೆ. ಎಎಪಿ ಕೇವಲ 24 ಸ್ಥಾನಗಳಿಗೆ ಕುಸಿದಿದ್ದು, ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್‌ ಈಬಾರಿಯೂ ಶೂನ್ಯ ಸಾಧನೆ ಮಾಡಿದೆ. ಬಿಜೆಪಿ ಗೆದ್ದು ಬೀಗುತ್ತಿದೆ.

ದೆಹಲಿ ಚುನಾವಣಾ ಫಲಿತಾಂಶದ ಬಗ್ಗೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದು, ಎಎಪಿ ಮತ್ತು ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಿಮ್ಮೊಳಗೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ’ ಎಂದು ಕಿಡಿಕಾರಿದ್ದಾರೆ.

ಪೌರಾಣಿಕ ಕಥೆಯುಳ್ಳ ವಿಡಿಯೋವೊಂದನ್ನು ಹಂಚಿಕೊಂಡು ಟ್ವೀಟ್‌ ಮಾಡಿರುವ ಒಮರ್ ಅಬ್ದುಲ್ಲಾ, “ನಿಮ್ಮಲ್ಲೇ ನೀವು ಇನ್ನಷ್ಟು ಕಿತ್ತಾಡಿಕೊಳ್ಳಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

ಇಂಡಿಯಾ ಮೈತ್ರಿಕೂಟ ಭಾಗವಾಗಿದ್ದ ಎಎಪಿ ಮತ್ತು ಕಾಂಗ್ರೆಸ್‌ ಮೈತ್ರಿಯಲ್ಲಿ ಸ್ಪರ್ಧಿಸಬೇಕು ಎಂಬುದು ಮಿತ್ರ ಪಕ್ಷಗಳ ಅಭಿಪ್ರಾಯವಾಗಿತ್ತು. ಆದರೆ, ಸೀಟು ಹಂಚಿಕೆ ಮತ್ತು ಹೊಂದಾಣಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚಾದ ಕಾರಣ, ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧೆಗಿಳಿದವು. ಈ ಸ್ಪರ್ಧೆಯು ಪ್ರಚಾರದ ಸಮಯದಲ್ಲಿ ಮಿತ್ರ ಪಕ್ಷಗಳ ನಡುವೆಯೇ ಪೈಪೋಟಿ, ವಾಕ್ಸಮರಕ್ಕೂ ಕಾರಣವಾಯಿತು. ಅಂತಿಮವಾಗಿ, ಬಿಜೆಪಿ ಗೆಲುವು ಸಾಧಿಸಿತು.

ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆ ಬಳಿಕ ‘ಇಂಡಿಯಾ’ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ ಎಂಬ ಅಭಿಪ್ರಾಯಗಳಿವೆ. ಹರಿಯಾಣದಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಮತ್ತು ಮಹಾರಾಷ್ಟ್ರದ ಕಳಪೆ ಪ್ರದರ್ಶನದ ಕಾರಣಕ್ಕಾಗಿ ‘ಇಂಡಿಯಾ’ ಕೂಟದ ನಾಯಕತ್ವವನ್ನು ಕಾಂಗ್ರೆಸ್‌ ಇತರ ಪಕ್ಷಗಳಿಗೆ ಬಿಟ್ಟುಕೊಡಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದರಲ್ಲಿ, ಎಎಪಿ ಕೂಡ ದನಿಗೂಡಿಸಿತ್ತು. ಆದರೆ, ದೆಹಲಿಯಲ್ಲಿ ಈಗ ಎಎಪಿಯೂ ಸೋಲುಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X