ಕಲಬುರಗಿಯ ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಸಂಘ, ಶ್ರೀಮತಿ ವ್ಹಿ.ಜಿ. ಮಹಿಳಾ ಕಾಲೇಜಿನಿಂದ ಕೊಡಮಾಡುವ ‘ಶ್ರೀಮತಿ ಬಸಮ್ಮ ತುಳಜಪ್ಪ ಉಪಳಾಂವಕರ ಸ್ಮಾರಕ ಸಾಹಿತ್ಯ ಕೃತಿ ಪ್ರಶಸ್ತಿ’ಗೆ ಡಾ. ಅಮರೇಶ ಯತಗಲ್ ಆಯ್ಕೆಯಾಗಿದ್ದಾರೆ.
ಕಲಬುರಗಿಯ ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘವು ಪ್ರತಿವರ್ಷದಂತೆ ಈ ವರ್ಷವೂ 2023ರಲ್ಲಿ ಪ್ರಕಟವಾದ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದ್ದು, ಫೆಬ್ರವರಿ 19ರಂದು ಕನ್ನಡನಾಡು ಪ್ರಕಾಶನದ 2024ರ ಹತ್ತು ಕೃತಿಗಳ ಲೋಕಾರ್ಪಣೆ ಮತ್ತು 2023ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ ಗೆಲುವು
ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥ ಡಾ. ಅಮರೇಶ ಯತಗಲ್ ಅವರ ‘ಗತಾನುಶೀಲನ’(ಇತಿಹಾಸ-ಸಂಸ್ಕೃತಿ) ಕೃತಿ ‘ಶ್ರೀಮತಿ ಬಸಮ್ಮ ತುಳಜಪ್ಪ ಉಪಳಾಂವಕರ ಸ್ಮಾರಕ ಸಾಹಿತ್ಯ ಕೃತಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದು, ಈ ಪ್ರಶಸ್ತಿಯು ಫಲಕ ಹಾಗೂ ₹5,000 ಗೌರವಧನ ಒಳಗೊಂಡಿರುತ್ತದೆ.