ಬಾಗೇಪಲ್ಲಿ | ಸ್ಮಶಾನ ಭೂಮಿ ಒತ್ತುವರಿ ತೆರವುಗೊಳಿಸಿ; ಸಿಪಿಎಂ ಆಗ್ರಹ

Date:

Advertisements

ಬಾಗೇಪಲ್ಲಿ ತಾಲೂಕಿನ ಶಂಖಮವಾರಪಲ್ಲಿ ಗ್ರಾಮದ ಸ್ಮಶಾನ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ಹಲವೆಡೆ ಸ್ಮಶಾನ ಭೂಮಿ ಮತ್ತು ನಕಾಶೆಗಳಲ್ಲಿರುವಂತೆ ಸ್ಮಶಾನಕ್ಕಿರುವ ರಸ್ತೆ, ರೈತರ ಜಮೀನುಗಳಿಗಿರುವ ದಾರಿಗಳು ಒತ್ತುವರಿಯಾಗಿದ್ದು, ಕೂಡಲೇ ಒತ್ತುವರಿ ತೆರವುಗೊಳಿಸಿ ಕ್ರಮ ಜರುಗಿಸಬೇಕೆಂದು ತಹಶೀಲ್ದಾರ್ ಕಚೇರಿಯ ಮುಂಭಾಗದಲ್ಲಿ ಸಿಪಿಎಂ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆಯನ್ನು ನಡೆಸಿದರು.‌

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಎಂ ಮುಖಂಡ ಲಕ್ಷ್ಮಣ್ ರೆಡ್ಡಿ, ಹಲವು ಬಾರಿ ಶಂಖಮವಾರಪಲ್ಲಿ ಗ್ರಾಮದ ಸ್ಮಶಾನ ಜಾಗವನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದು, ತೆರವುಗೊಳಿಸುವಂತೆ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಹಾಗೆಯೇ ನಕಾಶೆಯಲ್ಲಿರುವಂತೆ ಸ್ಮಶಾನಕ್ಕೆ, ರೈತರ ಜಮೀನುಗಳಿಗೆ ದಾರಿಯನ್ನೂ ಕಲ್ಪಿಸದೇ, ಮೃತರ ಅಂತಿಮ ಸಂಸ್ಕಾರಕ್ಕೆ ಪರದಾಡುವಂತಾಗಿದೆ. ಹಾಗೆಯೇ ರೈತರು ಒಬ್ಬರ ಜಮೀನು ದಾಟಿ ಮತ್ತೊಬ್ಬರ ಜಮೀನುಗಳಿಗೆ ಹೋಗಲು ದಾರಿಗಳಿಲ್ಲ. ನಕಾಶೆಯಲ್ಲಿದ್ದರೂ ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡು ರೈತರಿಗೆ ತೊಂದರೆ ಮಾಡುತ್ತಿದ್ದಾರೆ. ಹಾಗಾಗಿ ಕೂಡಲೇ ಒತ್ತುವರಿ ತೆರವಿಗೆ‌ ಕ್ರಮ ಕೈಗೊಳ್ಳಬೇಕು‌‌‌ ಎಂದು ಒತ್ತಾಯಿಸಿದರು.

ಸಿಪಿಎಂ ಮಾಜಿ ಜಿಲ್ಲಾ ಕಾರ್ಯದರ್ಶಿ ಎಂ.ಪಿ ಮುನಿವೆಂಕಟಪ್ಪ ಮಾತನಾಡಿ, ಈ ಭಾಗದಲ್ಲಿ ಶವ ಸಂಸ್ಕಾರಕ್ಕೆ ಹಲವೆಡೆ ಸೂಕ್ತ ಜಾಗವಿಲ್ಲ, ಸ್ಮಶಾನ ಜಾಗವಿದ್ದರೂ ಒತ್ತುವರಿ, ನಿರ್ವಹಣೆ ಕೊರತೆ, ದಾರಿ ಇಲ್ಲದಿರುವುದು ಮುಂತಾದ ಕಾರಣಗಳಿಂದ ಜನರಿಗೆ ಸ್ಮಶಾನ ಭೂಮಿ ಇಲ್ಲವಾಗಿದೆ. ಹಾಗಾಗಿ ತಾಲೂಕಿನೆಲ್ಲೆಡೆ ಸ್ಮಶಾನ ಜಾಗಗಳನ್ನು ಗುರುತಿಸಿ, ಅವುಗಳ ಸಂರಕ್ಷಣೆಗೆ ಕ್ರಮ ಜರುಗಿಸಬೇಕು. ಹಾಗೇಯೆ ಶಂಖಮವಾರಪಲ್ಲಿ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisements

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಫೆ.10ರಂದು ರೈತ ಸಂಘ ಬೃಹತ್‌ ಪ್ರತಿಭಟನೆ

ಈ ವೇಳೆ ಸಿಪಿಎಂ ಮುಖಂಡರಾದ ರಘುರಾಮರೆಡ್ಡಿ, ಚನ್ನರಾಯಪ್ಪ, ಬಿಳ್ಳೂರು ನಾಗರಾಜ್, ಸೋಮಶೇಖರ್, ಗ್ರಾಮಸ್ಥರಾದ ಎಸ್.ಎನ್.ಆದಿನಾರಾಯಣಪ್ಪ, ಹರೀಶ, ನಾರಾಯಣ ಸ್ವಾಮಿ, ನಂಜುಂಡಪ್ಪ, ಗಂಗಪ್ಪ, ವೆಂಕಟೇಶಪ್ಪ, ಗುರ್ರಪ್ಪ, ಗಂಗರಾಜು, ಸಿ.ಬಾವನ್ನಾ, ನಾಗರಾಜ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X