ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

Date:

Advertisements
  • ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ 24 ಟ್ರಸ್ಟ್‌ಗಳ ಕಾರ್ಯ ನಿರ್ವಹಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಕನ್ನಡ ಭವನದಲ್ಲಿ ಶನಿವಾರ ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳೊಂದಿಗೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿ, “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ 24 ಟ್ರಸ್ಟ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿವರ್ಷ ಈ ಟ್ರಸ್ಟ್‌ಗಳ ಕಾರ್ಯ ಚಟುವಟಿಕೆಗಾಗಿ ಅನುದಾನ ಒದಗಿಸಲಾಗುತ್ತಿದೆ” ಎಂದರು.

ಗುಬ್ಬಿ ವೀರಣ್ಣ ರಂಗಮಂದಿರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಂಸದೆ ಬಿ.ಜಯಶ್ರೀ ಅವರು ಅನುದಾನ ಹೆಚ್ಚಳಕ್ಕೆ ಮನವಿ ಮಾಡಿ, ಅದರ ಕಾರ್ಯ ಚಟುವಟಿಕೆ ವೀಕ್ಷಿಸಲು ಸಚಿವರನ್ನು ಆಹ್ವಾನಿಸಿದರು. ಬೆಟಗೇರಿ ಕೃಷ್ಣಶರ್ಮರ ಮನೆಯನ್ನು ಸ್ಮಾರಕವಾಗಿಸುವುದರ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಸಚಿವರು ಅದಕ್ಕೆ ಪೂರಕವಾಗಿ ಸ್ಪಂದಿಸಿ “ಈ ಬಗ್ಗೆ ವಿವರಗಳನ್ನು ತರಿಸಿಕೊಳ್ಳುತ್ತೇನೆ” ಎಂದು ಹೇಳಿದರು.

Advertisements

ಗಳಗನಾಥ ಮತ್ತು ರಾಜ ಪುರೋಹಿತ ಟ್ರಸ್ಟ್ ಗಳು ಕಟ್ಟಡ ನಿರ್ಮಾಣಕ್ಕೆ ಎರಡು ಕೋಟಿ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಚಿವರ ಗಮನಕ್ಕೆ ತರಲಾಯಿತು. ಹಾಲಬಾವಿ ಟ್ರಸ್ಟ್ ನವರು ಅವರ ಹೆಸರಿನಲ್ಲಿ ಆರ್ಟ್ ಗ್ಯಾಲರಿ ಒಂದನ್ನು ನಿರ್ಮಾಣ ಮಾಡಬೇಕು ಎಂಬ ಬೇಡಿಕೆಯನ್ನು ಸಚಿವರ ಮುಂದಿಟ್ಟರು.

ಈ ಸುದ್ದಿ ಓದಿದ್ದೀರಾ? ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ನಿಜಲಿಂಗಪ್ಪ ಟ್ರಸ್ಟ್ ಪರವಾಗಿ ಮಾಜಿ ಸಂಸದ ಹನುಮಂತಪ್ಪ ಅವರು ಮಾತನಾಡಿ ಸರ್ಕಾರಿ ಅಧಿಕಾರಿಗಳ ನೇಮಕದ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಕೋರಿದರು. ಕುವೆಂಪು ಟ್ರಸ್ಟ್ ನ ಕಾರ್ಯದರ್ಶಿ ಕಡಿದಾಳ್ ರಮೇಶ್ ಅವರು ಮಾತನಾಡಿ, “ಕುವೆಂಪು ಅವರ ಮನೆಯನ್ನು ರಾಷ್ಟ್ರದ ಅತ್ಯುತ್ತಮ ಕವಿಮನೆಯನ್ನಾಗಿ ಮಾಡಿದ್ದೇವೆ. ಇದು ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಮಾಡಲು ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವದ ಸಂದರ್ಭಗಳಲ್ಲಿ ಮತ್ತು ದಸರಾ ಪ್ರದರ್ಶನಗಳಲ್ಲಿ ಕುವೆಂಪು ಅವರ ಮನೆಯ ಟ್ಯಾಬ್ಲೋ ಮಾಡಿ ಪ್ರದರ್ಶಿಸಿದರೆ ಒಳ್ಳೆಯ ಪ್ರಚಾರ ಸಿಗುತ್ತದೆ” ಎಂದರು

ಬೇಂದ್ರೆ ಟ್ರಸ್ಟ್ ವತಿಯಿಂದ ಬೇಂದ್ರೆ ಅವರ ಜನ್ಮದಿನವನ್ನು ವಿಶ್ವಕವಿ ದಿನಾಚರಣೆ ಎಂದು ಆಚರಿಸುವಂತೆ ಕೋರಲಾಯಿತು. “ಎಲ್ಲ ಟ್ರಸ್ಟ್‌ಗಳ ಮನವಿಗಳನ್ನು ತಾವು ಅತ್ಯಂತ ಸಕಾರಾತ್ಮಕ ದೃಷ್ಟಿಯಿಂದಲೇ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ. ಟ್ರಸ್ಟ್ ಕಾರ್ಯನಿರ್ವಹಣೆಗೆ ಅಗತ್ಯವಾದ ಅನುದಾನ ಹೆಚ್ಚಿಸಲು ತಾವು ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ” ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X