ಇಂಗ್ಲೆಂಡ್ ಖ್ಯಾತ ಗಾಯಕನ ಬೀದಿ ಬದಿಯ ಪ್ರದರ್ಶನಕ್ಕೆ ಬೆಂಗಳೂರು ಪೊಲೀಸರಿಂದ ತಡೆ

Date:

Advertisements

ಇಂಗ್ಲೆಂಡ್ ಮೂಲದ ಖ್ಯಾತ ಗಾಯಕ ಎಡ್ ಶೀರನ್ ಅನುಮತಿ ಇಲ್ಲದೇ ಬೀದಿ ಬದಿಯಲ್ಲಿ ಕಾರ್ಯಕ್ರಮ ನಡೆಸುತ್ತಿದ್ದು, ಅವರ ಗಾಯನ ಪ್ರದರ್ಶನವನ್ನು ಪೊಲೀಸರು ತಡೆಯೊಡ್ಡಿದ್ದಾರೆ.

ಎಡ್ ಶೀರನ್ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ‘ಶೇಫ್ ಆಫ್ ಯು’ ಹಾಡನ್ನು ಉತ್ಸಾಹದಿಂದ ಹಾಡುತ್ತಾ ಪ್ರದರ್ಶನ ನೀಡುತ್ತಿದ್ದರು. ಅನುಮತಿ ಪಡೆಯದೇ ಹಾಡಿದಕ್ಕೆ ಕಬ್ಬನ್ ಪಾರ್ಕ್ ಪೊಲೀಸರು ಗಾಯನ ಪ್ರದರ್ಶನಕ್ಕೆ ಬ್ರೇಕ್ ಹಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಮೈಕ್ ಫ್ಲಗ್ ಕಿತ್ತು ಕಾರ್ಯಕ್ರಮ ಸ್ಥಗಿತಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

Advertisements

ಎಡ್ ಶೀರನ್ ಗಾಯನಕ್ಕೆ ಪೊಲೀಸರು ಬ್ರೇಕ್ ಹಾಕಿದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, ಅವರು ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆದಿರಲಿಲ್ಲ. ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದಾರಾ ಅಥವಾ ಇಲ್ಲವೋ ಎಂಬುದರ ಕುರಿತು ನಮಗೆ ಯಾವುದೇ ಮಾಹಿತಿ ಇಲ್ಲ. ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪ್ರದರ್ಶನ ನೀಡುವ ಮೊದಲು ಅನುಮತಿ ಪಡೆಯಬೇಕಾಗಿದೆ. ಅವರು ಪ್ರಚಾರಕ್ಕಾಗಿ ಇದ್ದಕ್ಕಿದ್ದಂತೆ ಈ ರೀತಿ ಮಾಡಿದ್ದಾರೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉದ್ಭವಿಸಬಹುದು ಎಂದು ಹೇಳಿದ್ದಾರೆ.

ಶೀರನ್ ಫೆ.5 ರಂದು ಚೆನ್ನೈನ ವೈಎಂಸಿಎ ಮೈದಾನದಲ್ಲೂ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರು. ಶೀರಿನ್ ಜೊತೆ ಭಾರತದ ಸಂಗೀತ ನಿರ್ದೇಶಕ ಎ ಆರ್‌ ರೆಹಮಾನ್ ಕೂಡ ಸಂಗೀತ ಸಂಜೆಯಲ್ಲಿ ಭಾಗಿಯಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಪ್ರಣಮ್ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಸೆ.12ಕ್ಕೆ ತೆರೆಗೆ

ಪುರಾತನ ಫಿಲಂಸ್ ನಿರ್ಮಾಣದ ಶ್ರೀಕಾಂತ್ ಹುಣಸೂರು ನಿರ್ದೇಶನದ ಡೈನಮಿಕ್ ಹೀರೊ ದೇವರಾಜ್...

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ನಿಧನ

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ಅವರು ಆಗಸ್ಟ್...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X