ಪೋಷಕರ ಪ್ರತಿದಿನದ ಲೈಂಗಿಕ ಕ್ರಿಯೆ ನೋಡ್ತೀರಾ? ಮೋದಿ ಸಮ್ಮಾನಿತ ಯೂಟ್ಯೂಬರ್ ರಣವೀರ್ ನ ವಿಕೃತ ಪ್ರಶ್ನೆ!

Date:

Advertisements

‘ಬೀರ್ ಬೈಸೆಪ್ಸ್’ ಎಂದೇ ಹೆಸರುಗಳಿಸಿಕೊಂಡಿರುವ ದೇಶದ ಪಾಡ್‌ ಕಾಸ್ಟರ್ ಮತ್ತು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಅವರು ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮದಲ್ಲಿ ಅಭ್ಯರ್ಥಿಯೋರ್ವರಿಗೆ ಕೇಳಿದ ಪ್ರಶ್ನೆಯೊಂದು ದೇಶಾದ್ಯಂತ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ, ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರಿಂದ ರಾಷ್ಟ್ರೀಯ ಯುವ ಕಂಟೆಂಟ್ ಕ್ರಿಯೇಟರ್ ಪ್ರಶಸ್ತಿಗಳನ್ನು ಪಡೆದಿದ್ದ ರಣವೀರ್ ಅಲ್ಲಾಬಾಡಿಯಾ ಎಲ್ಲ ಮಿತಿಗಳನ್ನು ಮೀರಿದ್ದು, ಭಾರೀ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಇಂಡಿಯಾಸ್ ಗಾಟ್ ಲೇಟೆಂಟ್‌ನ ಇತ್ತೀಚಿನ ಶೋನಲ್ಲಿ ಜಡ್ಜ್ ಆಗಿ ಭಾಗವಹಿಸಿದ್ದ ರಣವೀರ್, “ನಿಮ್ಮ ಜೀವನದುದ್ದಕ್ಕೂ ನಿಮ್ಮ ಪೋಷಕರು ಪ್ರತಿದಿನ ಲೈಂಗಿಕ ಕ್ರಿಯೆ ನಡೆಸುವುದನ್ನು ನೀವು ನೋಡುತ್ತೀರಾ ಅಥವಾ ಒಮ್ಮೆ ಅವರೊಂದಿಗೆ ಸೇರಿ ಅದನ್ನು ಶಾಶ್ವತವಾಗಿ ನಿಲ್ಲಿಸುತ್ತೀರಾ?” ಎಂದು ಸ್ಪರ್ಧಿಯೋರ್ವರಿಗೆ ಕೇಳಿರುವುದು ಈಗ ವಿವಾದಕ್ಕೆ ನಾಂದಿ ಹಾಡಿದೆ.

Advertisements

ಯೂಟ್ಯೂಬ್‌ನಲ್ಲಿ ಬಲಪಂಥೀಯ ವಿಚಾರಧಾರೆಗಳ ಒಲವು ಹೊಂದಿರುವ ಅಲ್ಲಾಬಾದಿಯಾ, ಯೂಟ್ಯೂಬ್‌ನಲ್ಲಿ ಒಂದು ಕೋಟಿಗೂ ಹೆಚ್ಚು ಚಂದಾದಾರರನ್ನು ಹೊಂದಿದ್ದಾರೆ.

ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಅವರ ಈ ಹೇಳಿಕೆಯು ಟ್ವಿಟ್ಟರ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಹಲವಾರು ಪ್ರಮುಖ ವ್ಯಕ್ತಿಗಳಿಂದ ಭಾರಿ ಟೀಕೆಗೆ ಗುರಿಯಾಗಿದ್ದಲ್ಲದೇ, ಯೂಟ್ಯೂಬರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಲ್ಲಾಬಾದಿಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ದೇಶದಲ್ಲಿ ಹಾಸ್ಯವನ್ನು ಅವನತಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಟೀಕಿಸುತ್ತಿದ್ದಾರೆ.

RANVEER ALLAHBADIA
ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯಿಂದ ‘ಯುವ ಕಂಟೆಂಟ್ ಕ್ರಿಯೇಟರ್ ಪ್ರಶಸ್ತಿ’ಯನ್ನು ಸ್ವೀಕರಿಸಿದ್ದ ಪಾಡ್ ಕಾಸ್ಟರ್

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪತ್ರಕರ್ತ ಮತ್ತು ಗೀತ ರಚನೆಕಾರ ನೀಲೇಶ್ ಮಿಶ್ರಾ, ‘ಇವರೆಲ್ಲ ವಿಕೃತ ಕಂಟೆಂಟ್ ಕ್ರಿಯೇಟರ್‌ಗಳು’ ಎಂದು ಜರೆದಿದ್ದಾರೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಕೂಡ ಯೂಟೂಬ್ಯರ್‌ನ ಹೇಳಿಕೆಯನ್ನು ಖಂಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

ರೋಶನ್ ರೈ ಎಂಬುವವರು ಟ್ವೀಟ್ ಮಾಡಿದ್ದು, “ಇವರೇ ನೋಡಿ, ಕಳೆದ ವರ್ಷ ಕೇಂದ್ರ ಸರ್ಕಾರದಿಂದ ಯುವ ಕಂಟೆಂಟ್ ಕ್ರಿಯೇಟರ್ ಪ್ರಶಸ್ತಿಯನ್ನು ಗೆದ್ದು, ಪ್ರಧಾನ ಮಂತ್ರಿಯಿಂದ ಅಧಿಕೃತವಾಗಿ ಸನ್ಮಾನಿಸಲ್ಪಟ್ಟವರು” ಎಂದು ಟಾಂಗ್ ನೀಡಿದ್ದಾರೆ.

ರಣವೀರ್ ಅಲ್ಲಾಬಾದಿಯಾ ನೀಡಿರುವ ಹೇಳಿಕೆಯ ಬಗ್ಗೆ ಮುಂಬೈನಲ್ಲಿ ಮಾಧ್ಯಮವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, “ನಾನು ರಣವೀರ್ ಅವರ ಹೇಳಿಕೆಯ ಬಗ್ಗೆ ತಿಳಿದುಕೊಂಡಿದ್ದೇನೆ. ವಿಡಿಯೋ ಇನ್ನೂ ನೋಡಿಲ್ಲ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ ಆದರೆ ನಾವು ಇತರರ ಸ್ವಾತಂತ್ರ್ಯವನ್ನು ಅತಿಕ್ರಮಿಸಿದಾಗ ನಮ್ಮ ಸ್ವಾತಂತ್ರ್ಯ ಕೊನೆಗೊಳ್ಳುತ್ತದೆ. ನಮ್ಮ ಸಮಾಜದಲ್ಲಿ, ನಾವು ಕೆಲವು ನಿಯಮಗಳನ್ನು ಮಾಡಿದ್ದೇವೆ. ಯಾರಾದರೂ ಅವುಗಳನ್ನು ಉಲ್ಲಂಘಿಸಿದರೆ ಅದು ಸಂಪೂರ್ಣವಾಗಿ ತಪ್ಪು ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಹೇಳಿದ್ದಾರೆ.

ರಣವೀರ್ ಅಲ್ಲಾಬಾಡಿಯಾ ವಿರುದ್ಧ ದೂರು ದಾಖಲು

ವಿವಾದಾತ್ಮಕ ಹೇಳಿಕೆಗಳ ನಂತರ, ಅಲ್ಲಾಬಾದಿಯಾ, ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಅಪೂರ್ವ ಮಖಿಜಾ, ಸ್ಟಾಂಡಪ್ ಕಾಮಿಡಿಯನ್ ಸಮಯ್ ರೈನಾ ಮತ್ತು ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮದ ಸಂಘಟಕರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಕಾರ್ಯಕ್ರಮದಲ್ಲಿ ನಿಂದನಾತ್ಮಕ ಭಾಷೆಯನ್ನು ಬಳಸಿದ ಆರೋಪದ ಮೇಲೆ ಮುಂಬೈ ಆಯುಕ್ತರು ಮತ್ತು ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ಪತ್ರದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ ಎಂದು ವರದಿಯಾಗಿದೆ.

ಏನಿದು ಇಂಡಿಯಾಸ್ ಗಾಟ್ ಲ್ಯಾಟೆಂಟ್ ಶೋ?

ಇಂಡಿಯಾಸ್ ಗಾಟ್ ಲ್ಯಾಟೆಂಟ್ ಎಂಬ ಶೋ ಇಂಡಿಯಾಸ್ ಗಾಟ್ ಟ್ಯಾಲೆಂಟ್ ನ ವಿಡಂಬನಾತ್ಮಕ ಪ್ರದರ್ಶನವಾಗಿದ್ದು, ಇದು ಕಿಲ್ ಟೋನಿ ಎಂಬ ಅಮೇರಿಕನ್ ಯೂಟ್ಯೂಬ್ ಶೋನಿಂದ ಸ್ಫೂರ್ತಿ ಪಡೆದಿದೆ. ಐಜಿಎಲ್ ಎಂಬುದು ಸ್ಕ್ರಿಪ್ಟ್ ಮಾಡದ ಹಾಸ್ಯ ಕಾರ್ಯಕ್ರಮವಾಗಿದ್ದು, ಸಮಯ್ ರೈನಾ ಅವರೊಂದಿಗೆ ಪ್ರತಿ ಪ್ರದರ್ಶನದಲ್ಲಿ ವಿಭಿನ್ನ ಕಂಟೆಂಟ್ ಕ್ರಿಯೇಟರ್‌ಗಳು ಭಾಗವಹಿಸುತ್ತಿದ್ದರು.

ರಣವೀರ್ ಅಲ್ಲಾಬಾದಿಯಾ ನೀಡಿರುವ ಈ ವಿವಾದಾತ್ಮಕ ಹೇಳಿಕೆಯ ಸಂದರ್ಭದಲ್ಲಿ ಮತ್ತೋರ್ವ ಯೂಟ್ಯೂಬರ್ ಆಶಿಶ್ ಚಂಚಲಾನಿ, ಅಪೂರ್ವ ಮುಖಿಜಾ (ದಿ ರೆಬೆಲ್ ಕಿಡ್) ಮತ್ತು ಜಸ್ಪ್ರೀತ್ ಸಿಂಗ್ ಜೊತೆಗೆ ಸಮಯ್ ರೈನಾ ಕೂಡ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X