ಕಡಲೆ ಬಣವೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಬೆಳೆಯನ್ನು ನಾಶಪಡಿಸಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಗ್ರಾಮದ ಭೀಮಪ್ಪ ಸುಂಕದ ಎಂಬುವವರಿಗೆ ಸೇರಿದ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
“ಸಾಲ ಸೂಲ ಮಾಡಿ ಫಸಲು ಬೆಳೆದಿದ್ದೆವು. ಈಗ ಬೆಳೆಯೂ ಇಲ್ಲ, ಹಣವೂ ಇಲ್ಲ ಎನ್ನುವಂತಾಗಿದೆ. ಇಂತಹ ಹೀನ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು. ನಷ್ಟದಲ್ಲಿರುವ ನಮಗೆ ಪರಿಹಾರ ಒದಗಿಸಿಕೊಡಬೇಕು ಎಂದು ಭೀಮಪ್ಪ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
ಈ ಸುದಿ ಓದಿದ್ದೀರಾ?: ಹುಬ್ಬಳ್ಳಿ | ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
