ಮೊಹಮ್ಮದ್ ಝುಬೈರ್ ಬಂಧಿಸದಂತೆ ತಡೆ ವಿಸ್ತರಿಸಿದ ಅಲಹಾಬಾದ್ ಹೈಕೋರ್ಟ್

Date:

Advertisements

ಯತಿ ನರಸಿಂಹಾನಂದ್ ವಿರುದ್ಧದ ಪೋಸ್ಟ್‌ಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರನ್ನು ಫೆಬ್ರವರಿ 17ರವರೆಗೆ ಬಂಧಿಸದಂತೆ ಅಲಹಾಬಾದ್ ಹೈಕೋರ್ಟ್ ತಡೆಯನ್ನು ವಿಸ್ತರಿಸಿದೆ.

ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ಯೋಗೇಂದ್ರ ಕುಮಾರ್ ಶ್ರೀವಾಸ್ತವ ಅವರ ಪೀಠವು ಈ ಮಹತ್ವದ ಆದೇಶವನ್ನು ನೀಡಿದೆ. ಯತಿ ನರಸಿಂಹಾನಂದ್ ಅವರ ಸಹಚರರ ದೂರಿನ ಮೇರೆಗೆ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿ ಝುಬೈರ್ ವಿರುದ್ಧ ಅಕ್ಟೋಬರ್ 2024ರಲ್ಲಿ ಗಾಜಿಯಾಬಾದ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

Advertisements

ಎಫ್‌ಐಆರ್ ಪ್ರಶ್ನಿಸಿ ಝುಬೈರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಡಿಸೆಂಬರ್ 20ರಂದು ಗಂಭೀರ ಪ್ರಕರಣದ ಅಪರಾಧಿ ಅಲ್ಲ ಎಂದು ಮೌಖಿಕವಾಗಿ ಗಮನಿಸಿದ ಹೈಕೋರ್ಟ್ ಜನವರಿ 6ರವರೆಗೆ ಅವರ ಬಂಧನಕ್ಕೆ ತಡೆ ನೀಡಿತ್ತು.

ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ. ಉದಿತಾ ತ್ಯಾಗಿ ಮೊಹಮ್ಮದ್ ಝುಬೈರ್ ವಿರುದ್ಧ ದೂರು ದಾಖಲಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X