ಬೆಂ.ಗ್ರಾಮಾಂತರ | ಮೈಕ್ರೋ ಫೈನಾನ್ಸ್ ಗಳು ಕಾನೂನು ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ :ಜಿಲ್ಲಾಧಿಕಾರಿ ಎ ಬಿ ಬಸವರಾಜು

Date:

Advertisements

ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರು ಪಾವತಿಸಲು ವಿಳಂಬ ಮಾಡುವ ಸಾಲಗಾರರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಮೈಕ್ರೋ ಫೈನಾನ್ಸ್ ಅಧಿಕಾರಿಗಳಿಗೆ ಸೂಚಿಸಿದರು.

ಬೆಂ.ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ರಾಜ್ಯದಲ್ಲಿ ಸುದ್ದಿ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಗೆ ಸಂಬಂಧಿಸಿದಂತೆ ಸುಖಾಸುಮ್ಮನೆ ಸಾಲಗಾರರ ಮೇಲೆ ಆಪಾದನೆ, ಕಿರುಕುಳ, ದೌರ್ಜನ್ಯ, ಬೈಗುಳ, ಬೆದರಿಕೆ, ಮನೆ ಸೀಜ್ ಮಾಡುವುದು, ಬಲವಂತವಾಗಿ ವಸೂಲಿ ಮಾಡುವುದುನ್ನು ನಿಲ್ಲಿಸಬೇಕು. ಕಾನೂನು ಚೌಕಟ್ಟಿನಲ್ಲಿ ಮೈಕ್ರೋ ಫೈನಾನ್ಸ್ಗಳು ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisements

ಸಾಮಾನ್ಯವಾಗಿ ಮಧ್ಯಮ ಹಾಗೂ ಕೆಳ ವರ್ಗದವರು ವೈದ್ಯಕೀಯ ಚಿಕಿತ್ಸೆ, ಮದುವೆ ಇನ್ನಿತರ ಕೆಲಸಗಳಿಗೆ ಸಾಲ ಪಡೆದಿರುತ್ತಾರೆ. ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಮ್ಮ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಆಗದಿರಲಿ ಎಚ್ಚರಿಸಿದರು.

ಜಿಲ್ಲೆಯಲ್ಲಿ 348 ಲೇವಾದೇವಿ, ಗಿರವಿ ಸಂಸ್ಥೆಗಳು :

2025 ರ ಜನವರಿ ಅಂತ್ಯಕ್ಕೆ 348 ಸಂಸ್ಥೆಗಳು ನೋಂದಣಿಯಾಗಿದ್ದು. ಅದರಲ್ಲಿ 105 ಲೇವಾದೇವಿದಾರರು, 243 ಗಿರವೀದಾರರು ವ್ಯವಹಾರ ನಡೆಸುತ್ತಿದ್ದಾರೆ. ನೆಲಮಂಗಲ ತಾಲ್ಲೂಕಿನಲ್ಲಿ 27 ಲೇವಾದೇವಿ, 45 ಗಿರವಿ ಸಂಸ್ಥೆಗಳು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 45 ಲೇವಾದೇವಿ, 47 ಗಿರವಿ ಸಂಸ್ಥೆಗಳು, ದೇವನಹಳ್ಳಿ ತಾಲ್ಲೂಕಿನಲ್ಲಿ 16 ಲೇವಾದೇವಿ, 75 ಗಿರವಿ ಸಂಸ್ಥೆಗಳು, ಹೊಸಕೋಟೆಯಲ್ಲಿ 17 ಲೇವಾದೇವಿ ಹಾಗೂ 76 ಗಿರವಿ ಸಂಸ್ಥೆಗಳು ವ್ಯವಹಾರ ನಡೆಸುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 184 ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಅದರ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004 ಪ್ರಕಾರ ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16 ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ. ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು :

  • ಸಾಲ ಪಡೆಯಲು ಅರ್ಜಿ ಸಲ್ಲಿಸುವವರ ಆದಾಯದ ಸಾಮರ್ಥ್ಯ ಪರಿಶೀಲಿಸಬೇಕು. ಅವರ ಪ್ರತಿ ತಿಂಗಳು ಹಣ ಕಟ್ಟುವ ಸಾಮರ್ಥ್ಯ ಮೀರಿ ಸಾಲ ವಿತರಣೆ ಮಾಡಬಾರದು.
  • ಸಾಲ ಕೊಡುವಾಗ ಅವರ ಮಾಸಿಕ ವೇತನ ಹಾಗೂ ಆದಾಯದ ಮೂಲ ಆಧರಿಸಿ ನೀಡಬೇಕು. ಅತಿ ಹೆಚ್ಚು ಇ.ಎಂ.ಐ ಪಾವತಿಸಲು ಸೂಚಿಸಬಾರದು.
  • ಮಾಸಿಕ ಆದಾಯ ಅಥವಾ ವೇತನದ ಶೇಕಡ 50ಕ್ಕಿಂತ ಹೆಚ್ಚು ಇರಬಾರದು. ಸಂಜೆ 06 ರಿಂದ ಬೆಳಗ್ಗೆ 09 ರವರೆಗೆ ಸಾಲ ಹಿಂಪಡೆಯುವ ಯಾವುದೇ ಪ್ರಕ್ರಿಯೆಗಳನ್ನು ಮಾಡಬಾರದು.
  • ಬೆಳಗ್ಗೆ 9:00 ರಿಂದ ಸಂಜೆ 06 ರೆವರೆಗೆ ಮಾತ್ರ ಕರೆ ಮಾಡಬೇಕು. ಕರೆ ಮಾಡುವಾಗ ಬೆದರಿಕೆ ಹಾಕಬಾರದು. ಕೆಟ್ಟ ಪದಗಳನ್ನು ಬಳಸಿ ನಿಂದಿಸಬಾರದು.
  • ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರ ಸಂಬಂಧಿಕರು, ಸ್ನೇಹಿತರು, ಸಹೋದ್ಯೋಗಿಗಳ ಮೂಲಕ ಸಾಲ ವಾಪಸ್ ಗೆ ಕಿರುಕುಳ ಕೊಡುವಂತಿಲ್ಲ. ಸಾಲ ಪಡೆದ ವಿವರವನ್ನು ಗೌಪ್ಯವಾಗಿಡಬೇಕು.
  • ಸಾರ್ವಜನಿಕ ಸ್ಥಳಗಳಲ್ಲಿ ನಿಂತು ಬಹಿರಂಗವಾಗಿ ಪ್ರಚಾರ ಆಗುವಂತೆ ಸಾಲ ತೀರಿಸಲು ಕೇಳಬಾರದು ಅವರ ಕುಟುಂಬಕ್ಕೆ ಆಸ್ತಿಗೆ ಹಾನಿ ಮಾಡಬಾರದು ರೌಡಿಗಳನ್ನು ಗೂಂಡಗಳನ್ನು ಸಾಲ ವಸೂಲಾತಿಗೆ ಕಳುಹಿಸಬಾರದು.

ಮೈಕ್ರೋ ಫೈನಾನ್ಸ್ ಗಳು ಮೇಲಿನ ಸರ್ಕಾರದ ಮಾರ್ಗಸೂಚಿಯನ್ವಯ ಕಾರ್ಯನಿರ್ವಹಿಸಬೇಕು. ವ್ಯಕ್ತಿಯ ಗೌರವ, ಘನತೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಿರಲಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂ.ಗ್ರಾಮಾಂತರ | ಬಾಲಕಾರ್ಮಿಕರಿಂದ ದುಡಿಸಿಕೊಳ್ಳುತ್ತಿದ್ದರೆ 1098 ಸಹಾಯವಾಣಿಗೆ ಕರೆ ಮಾಡಿ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಡಿವೈಎಸ್ಪಿ ರವಿ, ಸಹಕಾರ ಸಂಘಗಳ ಡೆಪ್ಯುಟಿ ರಿಜಿಸ್ಟ್ರಾರ್ ಚಂದ್ರಶೇಖರ್, ಸಹಾಯಕ ಡೆಪ್ಯುಟಿ ರಿಜಿಸ್ಟ್ರಾರ್ ರಾಮಾಂಜನೇಯ, ಲೀಡ್ ಬ್ಯಾಂಕ್ ಮ್ಯಾನೇಜರ್ ಮಧುಕರ್ ಸೇರಿದಂತೆ ಜಿಲ್ಲೆಯ ಲೇವಾದೇವಿ, ಗಿರವಿ ಸಂಸ್ಥೆಗಳ ಮುಖ್ಯಸ್ಥರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X