ವಿಶ್ವದಾದ್ಯಂತ ಹೂಡಿಕೆದಾರರನ್ನು ಕರ್ನಾಟಕದತ್ತ ಸೆಳೆಯುವ ಉದ್ದೇಶವನ್ನು ಹೊಂದಿರುವ ‘ಇನ್ವೆಸ್ಟ್ ಕರ್ನಾಟಕ’ ಇಂದಿನಿಂದ ಆರಂಭವಾಗಲಿದೆ. ಆದರೆ ಈ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಭಾಗಿಯಾಗಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ಇಬ್ಬರೂ ಭಾಗಿಯಾಗಬೇಕಾದ ಕಾರಣದಿಂದಾಗಿ ಇನ್ವೆಸ್ಟ್ ಕರ್ನಾಟಕದಲ್ಲಿ ಭಾಗಿಯಾಗಲು ಸಾಧ್ಯವಾಗಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಜೈರಾಮ್ ರಮೇಶ್ ಪೋಸ್ಟ್ ಮಾಡಿದ್ದಾರೆ. “ರಾಜ್ಯಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಅಧಿವೇಶನದಲ್ಲಿ ಬಜೆಟ್ ಚರ್ಚೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ಬೆಂಗಳೂರಿನಲ್ಲಿ ನಡೆಯುವ ಇನ್ವೆಸ್ಟ್ ಕರ್ನಾಟಕದಲ್ಲಿ ಭಾಗಿಯಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಇನ್ವೆಸ್ಟ್ ಕರ್ನಾಟಕ 2025 | ಇಂದಿನಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ
“ಇಬ್ಬರು ಕೂಡಾ ಶೃಂಗಸಭೆಗೆ ಶುಭಕೋರಿದ್ದಾರೆ. ಈ ಶೃಂಗಸಭೆಯು ಯಶಸ್ವಿಯಾಗುತ್ತದೆ ಎಂಬ ವಿಶ್ವಾಸವನ್ನು ಅವರು ಹೊಂದಿದ್ದಾರೆ ಎಂದು ಕೂಡಾ ಜೈರಾಮ್ ರಮೇಶ್ ತಿಳಿಸಿದ್ದಾರೆ.
Both the Leader of the Opposition in the Rajya Sabha and @INCIndia President Shri Mallikarjun @kharge and the Leader of the Opposition in the Lok Sabha Shri @RahulGandhi are extremely tied up in Parliament today on account of the continuing debate on the Budget. Hence they have…
— Jairam Ramesh (@Jairam_Ramesh) February 11, 2025
ಇನ್ವೆಸ್ಟ್ ಕರ್ನಾಟಕ 2025ರಲ್ಲಿ ಸಮಾವೇಶದಲ್ಲಿ ಕೇಂದ್ರ ಸಚಿವರುಗಳು ಮತ್ತು ಬಿಜೆಪಿ ನಾಯಕರಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ ಎಂಬ ಕಾರಣದಿಂದಾಗಿ ಕಾಂಗ್ರೆಸ್ ನಾಯಕರು ಅಸಮಾಧಾನ ಹೊಂದಿದ್ದಾರೆ ಎಂದು ವರದಿಗಳಾಗಿವೆ. ಇದಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಎಕ್ಸ್ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಫೆಬ್ರವರಿ 12ರಿಂದ 14ರವರೆಗೆ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶವು ನಡೆಯಲಿದೆ. ‘ಪ್ರಗತಿಯ ಮರುಕಲ್ಪನೆʼ (Reimagining Growth) ಎಂಬುದು ಇದರ ಧ್ಯೇಯವಾಗಿದೆ. ಈ ಸಮಾರಂಭದಲ್ಲಿ ಸ್ಥಳೀಯ ಹೂಡಿಕೆದಾರರು ಮತ್ತು ಜಾಗತಿಕ ಹೂಡಿಕೆದಾರರು ಭಾಗಿಯಾಗಲಿದ್ದಾರೆ.
