ಸೊಮಾಲಿಯಾ | ಫುಟ್‌ಬಾಲ್‌ ಮೈದಾನದಲ್ಲಿ ಬಾಂಬ್‌ ಸ್ಫೋಟ; 22 ಮಕ್ಕಳು ಸೇರಿದಂತೆ 27 ಮಂದಿ ಸಾವು

Date:

Advertisements

ಫುಟ್‌ಬಾಲ್‌ ಆಡುತ್ತಿದ್ದ ವೇಳೆ ಬಾಂಬ್‌ ಸ್ಫೋಟಿಸಿದ ಪರಿಣಾಮ 22 ಮಕ್ಕಳು ಸೇರಿದಂತೆ ಒಟ್ಟು 27 ಜನರು ಸಾವನ್ನಪ್ಪಿರುವ ಘಟನೆ ದಕ್ಷಿಣ ಸೊಮಾಲಿಯಾದ ಕೊರಿಯೊಲಿ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಷಾಬೆಲ್ಲೆ ಪ್ರದೇಶದ ಮುರಾಲೆ ಗ್ರಾಮದ ಫುಟ್‌ಬಾಲ್‌ ಮೈದಾನದಲ್ಲಿ ಶನಿವಾರ ಮಕ್ಕಳು ಆಟವಾಡುತ್ತಿದ್ದಾಗ ನೆಲಬಾಂಬ್‌ ಸ್ಫೋಟಿಸಿದ ಪರಿಣಾಮ ದುರಂತ ಸಂಭವಿಸಿದೆ ಎಂದು ಕ್ರೋಲಿ ಪಟ್ಟಣದ ಉಪ ಜಿಲ್ಲಾಧಿಕಾರಿ ಅಬ್ದಿ ಅಹ್ಮದ್ ಅಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸೊಮಾಲಿಯಾ ರಾಜಧಾನಿ ಮೊಗಾದಿಶುವಿನಲ್ಲಿರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಇಬ್ಬರು ಗಾಯಾಳುಗಳು ಮೃತಪಟ್ಟಿದ್ಧಾರೆ ಎಂದು ಅಹ್ಮದ್ ಹೇಳಿದ್ದಾರೆ. ಮೃತ ಮಕ್ಕಳೆಲ್ಲರೂ 10 ರಿಂದ 15 ವರ್ಷದೊಳಗಿನ ಹುಡುಗರಾಗಿದ್ದು, ಇವರ ಮೃತದೇಹಗಳನ್ನು ಕ್ಯೂರೊಲೆನಲ್ಲಿರುವ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಹೋಟೆಲ್ ಮೇಲೆ ಉಗ್ರರ ದಾಳಿ; ಒಂಬತ್ತು ಮಂದಿ ಸಾವು

ಸೊಮಾಲಿಯಾ ರಾಜಧಾನಿ ಮೊಗದಿಶುವಿನಲ್ಲಿರುವ ಪರ್ಲ್ ಬೀಚ್‌ ಹೋಟೆಲ್‌ ಮೇಲೆ ಅಲ್ ಶಬಾಬ್‌ ಉಗ್ರರು ನಡೆಸಿದ ದಾಳಿಯಲ್ಲಿ ಮೂವರು ಸೈನಿಕರು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟು, ಹತ್ತು ಮಂದಿ ಗಾಯಗೊಂಡಿದ್ದಾರೆ.

ಹೋಟೆಲ್‌‌ನಿಂದ 84 ಜನರನ್ನು ಭದ್ರತಾ ಪಡೆಗಳು ರಕ್ಷಿಸಿವೆ. ಅಲ್‌–ಕೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಅಲ್-ಶಬಾಬ್ ದಾಳಿಯ ಹೊಣೆ ಹೊತ್ತಿಕೊಂಡಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ | ಟ್ರಂಪ್ ಬಜೆಟ್‌ಗೆ ಸಿಗದ ಅನುಮೋದನೆ; ಸರ್ಕಾರದ ಕೆಲಸಗಳು ಸ್ಥಗಿತ!

ಅಮೆರಿಕ ಸೆನೆಟ್‌ನಲ್ಲಿ ಮಂಡಿಸಲಾದ ತಾತ್ಕಾಲಿಕ ಹಣಕಾಸು ಮಸೂದೆಗೆ (ಬಜೆಟ್‌) ಅನುಮೋದನೆ ದೊರೆಯದ...

ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ: 69 ಸಾವು, 140ಕ್ಕೂ ಹೆಚ್ಚು ಮಂದಿಗೆ ಗಾಯ

ಫಿಲಿಪೈನ್ಸ್‌ನ ಮಧ್ಯ ಭಾಗದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ 69...

ಸೌದಿ ಅರೇಬಿಯಾ | ವಿಸಿಟಿಂಗ್ ವೀಸಾದಲ್ಲಿರುವವರಿಗೆ ‘ವಿಸಿಟರ್ ಐಡಿ’ ಬಳಸಿ ಬ್ಯಾಂಕ್ ಖಾತೆ ತೆರೆಯಲು ಅವಕಾಶ

ಸೌದಿ ಅರೇಬಿಯಾಕ್ಕೆ ವಿಸಿಟಿಂಗ್ ವೀಸಾದ ಮೂಲಕ ಭೇಟಿ ನೀಡುವವರು ಇನ್ನು ಮುಂದೆ...

ಪಾಕಿಸ್ತಾನ | ಬಲೂಚಿಸ್ತಾನದಲ್ಲಿ ಬಾಂಬ್ ದಾಳಿ: 10 ಮಂದಿ ಸಾವು

ಪಾಕಿಸ್ತಾನದ ವಿವಾದಿತ ರಾಜ್ಯವಾದ ಬಲೂಚಿಸ್ತಾನದಲ್ಲಿ ಅರೆಸೈನಿಕ ಪಡೆಗಳ ಮೇಲೆ ಬಾಂಬ್‌ ದಾಳಿ...

Download Eedina App Android / iOS

X