ವಲಸೆ ಕಾರ್ಮಿಕರಿದ್ದ ಟಾಟಾ ವಿಂಗರ್ ವಾಹನ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬಾಳ್ಳುಪೇಟೆ ಬಳಿಯ ನಿಡನೂರಿನಲ್ಲಿ ಇಂದು ಬೆಳಗಿನಜಾವ ನಡೆದಿದೆ.
ಕಾರ್ಮಿಕರನ್ನು ತಮಿಳುನಾಡಿನ ಸೇಲಂನಿಂದ ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ಇರುವ ಕಾಫಿ ತೋಟಕ್ಕೆ ಕೊಂಡೊಯ್ಯುತ್ತಿದ್ದ ವಿಂಗರ್ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು 14 ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಕೂಲಿ ಕಾರ್ಮಿಕರ ಬಟ್ಟೆ, ಆಹಾರ ಸಾಮಗ್ರಿಗಳು ಮಣ್ಣುಪಾಲಾಗಿವೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಸ್ಥಳೀಯರು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ವಾಹನದ ತೀವ್ರ ವೇಗವೇ ಅಪಘಾತಕ್ಕೆ ಕಾರಣವೆಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ?: ಹಾಸನ l ಮುಂದುವರೆದ ಮೈಕ್ರೋ ಫೈನಾನ್ಸ್ ಕಿರುಕುಳ; ಕೊಟ್ಟಿಗೆಗೆ ಬಿದ್ದಿದ್ದ ಕುಟುಂಬ ಮರಳಿ ಮನೆಗೆ
ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
