ಗುಜರಿ ಸಾಮಾನು ದಾಸ್ತಾನಿಗೆ ಬೆಂಕಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲು ಪೆರಂಪಳ್ಳಿ ರಸ್ತೆಯ ಸಂತೋಷ್ ನಗರದಲ್ಲಿ ಮಂಗಳವಾರ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ಹಾಸನ l ವಲಸೆ ಕಾರ್ಮಿಕರಿದ್ದ ವಾಹನ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ
ಗುಜರಿ ದಾಸ್ತಾನಿನಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲೂ ಮನೆಗಳು ಇರುವುದರಿಂದ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಪ್ರಕ್ರಿಯೆ ನಡೆಯುತ್ತಿದೆ.