ಬೀದರ್ ಜಿಲ್ಲೆಯ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸ್ಪಂದಿಸಿದ್ದು, ಬೀದರ್ ಪ್ರವಾಸೋದ್ಯಮ ಅಭಿವೃದ್ಧಿಗೆ ₹25 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ.
ʼಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಸ್ವದೇಶ ದರ್ಶನ ಯೋಜನೆಯಡಿ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದ್ದೆ. ಅವರು ಅದಕ್ಕೆ ಸ್ಪಂದಿಸಿ ಅನುದಾನ ಮಂಜೂರು ಮಾಡಿದ್ದಾರೆ. ಈ ಮಹತ್ವದ ನಿರ್ಧಾರಕ್ಕೆ ನಾನು ಕೇಂದ್ರ ಸಚಿವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದೇನೆʼ ಎಂದಿದ್ದಾರೆ.
ʼಪ್ರಸ್ತುತ ಪ್ರವಾಸೋದ್ಯಮ ಇಲಾಖೆಯ ಕ್ರಿಯಾಯೋಜನೆ ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ಅನುದಾನ ಬಿಡುಗಡೆಗೊಳ್ಳಲಿದೆ ಹಾಗೂ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗಲಿವೆ. ಈ ಅನುದಾನದ ನೆರವಿನಿಂದ ಬೀದರ್ ಜಿಲ್ಲೆಯ ಪ್ರವಾಸಿ ತಾಣಗಳ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರವಾಸಿಗರಿಗೆ ಉತ್ತಮ ಸೌಲಭ್ಯಗಳ ಕಲ್ಪನೆ ಸಾಧ್ಯವಾಗಲಿದೆʼ ಎಂದು ಮಾಹಿತಿ ನೀಡಿದ್ದಾರೆ.