ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ವನಶ್ರೀ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಅನುಮಾನಾಸ್ಪದ ಸಾವು ಹಾಗೂ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ವಸತಿ ನಿಲಯದ ಮುಖ್ಯಸ್ಥ ಎಚ್ ಪಿ ಮಂಜಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ತನಿಖೆಗಾಗಿ ವಶಕ್ಕೆ ಪಡೆದಿದ್ದ ಪೊಲೀಸರು ಮೃತ ಬಾಲಕಿಯ ಪೋಷಕರು ಮತ್ತು ವಸತಿ ನಿಲಯದ ಇತರ ಬಾಲಕಿಯರು ನೀಡಿದ ದೂರು, ಹೇಳಿಕೆಯನ್ನು ಆಧರಿಸಿ ಪೋಕ್ಸೋ ಕಾಯಿದೆ ಅಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಜೂನ್ ಮೊದಲ ವಾರದಲ್ಲಿ ವಸತಿ ಶಾಲೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ತೇಜಸ್ವಿನಿ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಳು. ಆಕೆಗೆ ಭಾರೀ ಪ್ರಮಾಣದಲ್ಲಿ ನೀರು ಕುಡಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿ ಬಾಲಕಿಯ ಸಹಪಾಠಿಗಳು ಆರೋಪಿಸಿದ್ದರು. ಶನಿವಾರ ಬಾಲಕಿಯ ಪೋಷಕರು ವಸತಿ ನಿಲಯದ ಎದುರು ಪ್ರತಿಭಟನೆ ನಡೆಸಿದ್ದರು.
ವನಶ್ರೀ ಮಂಜಪ್ಪ ಎಂದೇ ಹೆಸರಾಗಿರುವ ಎಚ್ ಪಿ ಮಂಜಪ್ಪ ಆರ್‌ಎಸ್‌ಎಸ್ ನಂಟು ಹೊಂದಿದ್ದು, ಬಹಳ ವರ್ಷಗಳಿಂದಲೂ ಮಕ್ಕಳನ್ನು ಮತ್ತು ವಸತಿ ಶಾಲೆಯಲ್ಲಿ ಕೆಲಸಕ್ಕೆ ಸೇರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿತ್ತು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಹಾವು ಕಡಿದು ರೈತ ಸಾವು