ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಔರಾದ್ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮಂಗಳವಾರವೂ ಮುಂದುವರಿಯಿತು. ಕೈಗೆ ಕಪ್ಪು ಬಟ್ಟೆ ಧರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
‘ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಸಿಯುಜಿ ಸಿಮ್ ಮತ್ತು ಡೇಟಾ, ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್‌ಗಳನ್ನು ಕಲ್ಪಿಸಬೇಕು. ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು. ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವುದು ಸೇರಿದಂತೆ 23 ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ʼಈ ಹಿಂದೆ ಧರಣಿ ನಡೆಸಿದಾಗ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈವರೆಗೆ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬದಲಿಗೆ ಕೆಲಸದ ಒತ್ತಡ ಹೆಚ್ಚಿಸಲಾಗಿದೆʼ ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ
ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ನಾಮದೇವ ಮೇತ್ರಿ ಹಾಗೂ ಅಧಿಕಾರಿಗಳಾದ ಮಲ್ಲಿಕಾರ್ಜುನ ಆಲೂರೆ, ನರಸಿಂಹಲು, ಪಂಡಿತ, ಬಾಬುರಾವ್, ಅನ್ವರ್, ಕ್ರಾಂತಿ, ಬಾಲಿಕಾ, ನಕುಶಾ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.