ರಾಯಚೂರು ತಾಲೂಕಿನ ಮಮದಾಪೂರು ಗ್ರಾಮದ ಜನ ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಜನರ ಬಳಕೆಗೆ ಹಾಗೂ ದನಕರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಗ್ರಾಮದ ಹೊರವಲಯದಲ್ಲಿ ಎರಡು ಹ್ಯಾಂಡ್ ಬೋರ್‌ವೆಲ್‌ಗಳು ಇದ್ದರೂ ಸುಮಾರು ದಿನಗಳಿಂದ ಕೆಟ್ಟು ನಿಂತಿವೆ. ಇನ್ನು ಕೆಲವೇ ದಿನಗಳಲ್ಲಿ ಬೇಸಿಗೆ ಕಾಲ ಪ್ರಾರಂಭವಾಗುವುದರಿಂದ ಇನ್ನಷ್ಟು ಗಂಭೀರ ಪರಿಸ್ಥಿತಿ ಉಂಟಾಗುವ ಸಂಭವವಿದೆ. ಕೆಟ್ಟು ಹೋದ ಬೋರ್‌ವೆಲ್‌ಗಳನ್ನು ದುರಸ್ತಿ ಮಾಡಿಸಿ ಜನರಿಗೆ ಹಾಗೂ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು. ಸಾಧ್ಯವಾದಷ್ಟು ಶೀಘ್ರವಾಗಿ ಸಮಸ್ಯೆಗೆ ಪರಿಹಾರ ಒದಗಿಸಬೇಕು. ಬೇಡಿಕೆ ಈಡೇರಿಕೆಗೆ ನಿರ್ಲಕ್ಷ್ಯ ವಹಿಸಿದರೆ ಗ್ರಾಮಸ್ಥರು ಮತ್ತು ದನಕರುಗಳೊಂದಿಗೆ ಕಚೇರಿ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಯಿತು.
ಈ ಸುದ್ದಿ ಓದಿದ್ದೀರಾ?: ರಾಯಚೂರು | ಭೂಹೀನರಿಗೆ ಪಟ್ಟಾ ನೀಡಲು ಭೂಮಿ ವಸತಿ ಹಕ್ಕು ವಂಚಿತರ ಸಂಘಟನೆ ಆಗ್ರಹ
ಈ ವೇಳೆ ಸಂಘದ ಗ್ರಾಮ ಘಟಕದ ಅಧ್ಯಕ್ಷ ಶಿವರಾಜ ಬಡಿಗೇರ್, ಜಿಲ್ಲಾ ಉಪಾಧ್ಯಕ್ಷ ಕೆ ಜಿ ವೀರೇಶ ಸೇರಿದಂತೆ ಅನೇಕರಿದ್ದರು.
