ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ಪ್ರಯಾಣ ದರ ಏರಿಕೆ ಖಂಡಿಸಿ ಮೋದಿ ಮುಖವಾಡ ಧರಿಸಿ, ಕಿವಿಗೆ ಹೂವು ಇಟ್ಟುಕೊಂಡು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮೆಟ್ರೋ ಟಿಕೆಟ್ ದರವನ್ನು ಏರಿಕೆ ಮಾಡಿರುವುದು ಕೇಂದ್ರ ಸರ್ಕಾರ. ಆದರೆ, ಕಾಂಗ್ರೆಸ್ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ನೇತೃತ್ವದಲ್ಲಿ ರಾಜಾಜಿನಗರ ಮೆಟ್ರೋ ನಿಲ್ದಾಣದಿಂದ ಮಂತ್ರಿ ಸ್ವೇರ್ ಮೆಟ್ರೋ ನಿಲ್ದಾಣದ ವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿ ಪ್ರತಿಭಟನೆ ನಡೆಸಿದ್ದಾರೆ.

‘ಕೇಂದ್ರ ಸರ್ಕಾರ ಕೂಡಲೇ ಮೆಟ್ರೋ ಪ್ರಯಾಣ ದರವನ್ನು ಕಡಿಮೆ ಮಾಡಬೇಕು’. ‘ಪ್ರಯಾಣ ದರ ಕಡಿಮೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ ಕೇಂದ್ರ ಬಿಜೆಪಿ ಸರ್ಕಾರ’ ಎಂಬಿತ್ಯಾದಿ ಪ್ಲೆಕಾರ್ಡ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಬುಧವಾರ, ಜಾಗೃತ ಕರ್ನಾಟಕದ ಮುಖಂಡ ರಾಜಶೇಖರ್ ಅಕ್ಕಿ ಅವರೂ ಕೂಡ ಮೆಟ್ರೋದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ‘ಮೆಟ್ರೋ ದರ ಇಳಿಸಿ’ ಎಂದು ಪ್ಲೆಕಾರ್ಡ್ ಹಿಡಿದು ಆಕ್ರೋಶ ವ್ಯಕ್ತಪಡಿಡಿಸಿದ್ದಾರೆ.