ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ಪಡೆದವರಿಗೆ ಕಿರುಕುಳ ನೀಡುವುದನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಸ್ತು ಎಂದಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರವು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದರು ಮತ್ತು ಮರುಪರಿಶೀಲನೆಗೆ ಸೂಚಿಸಿದ್ದರು. ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಸರ್ಕಾರ ರಾಜಭವನಕ್ಕೆ ಕಳುಹಿಸಿತ್ತು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್; ಜನಪರ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರ ನಡೆ ಸರ್ವಥಾ ಸರಿಯಲ್ಲ
ಬಡ್ಡಿ, ಚಕ್ರಬಡ್ಡಿ ಹಾಕುವ ಮೈಕ್ರೋ ಫೈನಾನ್ಸ್ ಕಿರುಕುಳದಿಂದಾಗಿ ಹಲವಾರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ ಹಲವು ಮಂದಿ ಸಾಲಗಾರ ನೀಡಿದವರ ಕಾಟದಿಂದ ತಪ್ಪಿಸಿಕೊಳ್ಳಲು ಊರು ತೊರೆದು ಹೋಗಿರುವ ಘಟನೆಗಳು ನಡೆದಿದೆ. ಇವೆಲ್ಲವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರವು ವಿಶೇಷ ಸಚಿವ ಸಂಪುಟ ಸಭೆ ಕರೆದು, ಹಲವು ನಿಯಮಗಳೊಂದಿಗೆ ಸುಗ್ರೀವಾಜ್ಞೆ ಮಸೂದೆ ರಚಿಸಿತ್ತು. ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಕಳುಹಿಸಿತ್ತು.
10 ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ದಂಡವನ್ನು ಸುಗ್ರೀವಾಜ್ಞೆಯನ್ನು ಉಲ್ಲೇಖಿಸಲಾಗಿತ್ತು. ಆದರೆ ಇದು ಅತಿಯಾಗಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿರುವುದಾಗಿ ಸಿಎಂ ಕಚೇರಿ ತಿಳಿಸಿದೆ. ಹಾಗೆಯೇ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಬಳಸಬಹುದಿತ್ತು ಎಂದೂ ತಿಳಿಸಿದ್ದರು.
ನಿಯಮ ಪ್ರಕಾರ ರಾಜ್ಯಪಾಲರು ಸೂಚಿಸಿದ್ದ ಮರುಪರಿಶೀಲನೆಯನ್ನು ಸರ್ಕಾರ ಸರಿಪಡಿಸಿ ಮತ್ತೆ ಸುಗ್ರೀವಾಜ್ಞೆ ಪ್ರಸ್ತಾಪ ಸಲ್ಲಿಸಿದರೆ ಅದಕ್ಕೆ ರಾಜ್ಯಪಾಲರು ಸಹಿ ಹಾಕಲೇಬೇಕು. ಆದರೆ ತಮಿಳುನಾಡು ರಾಜ್ಯಪಾಲರು ಯಾವುದೇ ಮರುಪರಿಶೀಲನೆ ಸೂಚಿಸದೆ ಹಾಗೆಯೇ ಉಳಿಸಿಕೊಳ್ಳಿರುವುದು ಕೂಡಾ ಪ್ರಸ್ತಾಪಿಸಬೇಕಾದ ವಿಚಾರ.
