ತುಮಕೂರು | ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ : ಜಿ.ಪ್ರಭು

Date:

Advertisements

ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರು ಹೇಳಿದರು.

ತುಮಕೂರು ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಮತ್ತು ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ  ದೊರೆತು 75 ವರ್ಷಗಳು ಕಳೆದರೂ ಜೀತ ಪದ್ಧತಿ ಇನ್ನೂ ಜೀವಂತವಾಗಿರುವುದು ಶೋಚನೀಯ ಸಂಗತಿ. ಆರ್ಥಿಕವಾಗಿ ಹಿಂದುಳಿದವರು ಜೀತ ಪದ್ಧತಿಗೆ ಒಳಗಾಗುತ್ತಾರೆ. ಜೀತ ಪದ್ಧತಿಯಿಂದ ಮಾನವ ಹಕ್ಕುಗಳಿಗೆ ಚ್ಯುತಿಯುಂಟಾಗುತ್ತದೆ. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಜೀತ ಪದ್ಧತಿ, ಸತಿ ಸಹಗಮನ, ಅಸ್ಪೃಶ್ಯತೆ, ಮಾನವ ಕಳ್ಳಸಾಗಾಣಿಕೆ, ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ಗಳಂತಹ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆಗೊಳಿಸುವಲ್ಲಿ ಯಶಸ್ವಿ ಹೆಜ್ಜೆಗಳನ್ನು ಹಾಕುತ್ತಿದ್ದೇವೆ ಎಂದು ತಿಳಿಸಿದರು. 

1001029565

ಜೀತ ಪದ್ಧತಿ ನಿರ್ಮೂಲನೆ ಕಾಯ್ದೆಯು 1976ರಲ್ಲಿ ಜಾರಿಗೆ ತರಲಾಗಿದ್ದು, ಕಾಯ್ದೆಯ ಅನುಷ್ಟಾನದ ಜವಾಬ್ದಾರಿಯನ್ನು ಎಲ್ಲ ಅಧಿಕಾರಿಗಳಿಗೆ ನೀಡಲಾಗಿದೆ. ಜೀತ ಪದ್ಧತಿಗೆ ಬಡತನವೇ ಮುಖ್ಯ ಕಾರಣ. ಜೀತ ಕಾರ್ಮಿಕರನ್ನು ಮುಖ್ಯ ವಾಹಿನಿಗೆ ತರುವ ಹೊಣೆಗಾರಿಕೆ ಎಲ್ಲ ಅಧಿಕಾರಿಗಳ ಮೇಲಿದೆ. ಜೀತ ವಿಮುಕ್ತರಿಗೆ ಕಾಯ್ದೆಗಳ ಮೂಲಕ ಭದ್ರತೆ ಒದಗಿಸಿ ಪುನರ್ವಸತಿ ಕಲ್ಪಿಸಬೇಕು. ಜೀತ ನಿರ್ಮೂಲನಾ ಕಾಯ್ದೆಯಿಂದ ಜೀತ ಪದ್ಧತಿಯನ್ನು ತಡೆಯುವುದಷ್ಟೇ ಅಲ್ಲದೆ ಜೀತ ವಿಮುಕ್ತ ವ್ಯಕ್ತಿಗೆ ಜೀವನ ನಿರ್ವಹಣೆಗಾಗಿ ಉದ್ಯೋಗ ನೀಡಿ ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಹೇಳಿದರು.

Advertisements

ಜೀತಗಾರ ಬಿಡುಗಡೆಯಾಗಬೇಕು – ಆಳುವ ವ್ಯಕ್ತಿಯಾಗಬೇಕು 

     ಪ್ರಾಸ್ತಾವಿಕವಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಮನುಷ್ಯನ ಹುಟ್ಟು-ಸಾವಿನ ನಡುವೆ ದುಡಿಮೆ ಅನಿವಾರ್ಯ. ಮನುಷ್ಯನು ಹೇಗೆ ದುಡಿಯಬೇಕು? ಯಾವಾಗ ದುಡಿಯಬೇಕು? ಎಷ್ಟು ದುಡಿಯಬೇಕು? ಎನ್ನುವುದು ಬಹಳ ಮುಖ್ಯವಾಗಿರುತ್ತದೆ. ಯಾವುದೇ ಚಲನ-ವಲನಕ್ಕೆ ಸ್ವತಂತ್ರವಿಲ್ಲದೆ ಒಬ್ಬ ವ್ಯಕ್ತಿಯನ್ನು ಹಿಡಿತದಲ್ಲಿಟ್ಟುಕೊಂಡು ಬದುಕಿಗೆ ನಿರ್ಬಂಧ ಹೇರುವುದೇ ಜೀತ ಪದ್ಧತಿ. ಮನುಷ್ಯನ ದುಡಿಮೆಯಲ್ಲಿ ಇತಿಮಿತಿ ಇರಬೇಕು. ನಿರಂತರ ಸೇವೆಯ ನಡುವೆ ವಿಶ್ರಾಂತಿ ನೀಡುವುದು ಅವಶ್ಯ. ಸಾಯುವವರೆಗೆ ಯಜಮಾನನ ಕಪಿಮುಷ್ಠಿಯಲ್ಲಿ ದುಡಿಯುವ ಜೀತ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲು ಹಾಗೂ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸರ್ಕಾರದೊಂದಿಗೆ ಹಲವಾರು ಸಂಘಟನೆಗಳು ಕೈಜೋಡಿಸುತ್ತಿರುವುದು ಸ್ವಾಗತಾರ್ಹ ಎಂದು ತಿಳಿಸಿದರು. 

1001029566

     ಜೀತ ಕಾರ್ಮಿಕ ಪದ್ಧತಿಯು ಮಾನವ ಕಳ್ಳಸಾಗಣೆಯ ಒಂದು ಬಲವಂತದ ರೂಪವಾಗಿದ್ದು, ಈ ಪದ್ಧತಿಯಲ್ಲಿ ಕಾರ್ಮಿಕರು ಭಾರತೀಯ ಸಂವಿಧಾನವು ಖಾತರಿಪಡಿಸಿರುವ ಸ್ವಾತಂತ್ರ್ಯ  ಮತ್ತು ಹಕ್ಕುಗಳನ್ನು ಕಳೆದುಕೊಳ್ಳುವಂತೆ ಒತ್ತಾಯಿಸಲಾಗುತ್ತದೆ. ಜೀತ ಪದ್ಧತಿ ಕಂಡು ಬಂದವರು ಕಾರ್ಮಿಕ ಸಹಾಯವಾಣಿ 155214ಕ್ಕೆ ಮಾಹಿತಿ ನೀಡುವ ಮೂಲಕ ಈ ಅನಿಷ್ಠ ಪದ್ಧತಿಯನ್ನು ರದ್ದುಗೊಳಿಸುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು. 

     1206 ರಿಂದ 1296ರ ಅವಧಿಯಲ್ಲಿ ಗುಲಾಮಿ ಸಂತತಿ ಆಡಳಿತ ನಡೆಸಿದ ನಿದರ್ಶನವಿದೆ. ಈ ನಿಟ್ಟಿನಲ್ಲಿ ಜೀತಗಾರ ಜೀತದಿಂದ ಬಿಡುಗಡೆಯಾಗಿ ಆಳುವ ವ್ಯಕ್ತಿಯಾದಾಗ ಮಾತ್ರ ಜೀತ ಪದ್ಧತಿ ನಿರ್ಮೂಲನೆ ಸಾಧ್ಯವೆಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಮುಕ್ತಿ ಅಲೆಯನ್ಸ್ನ ಸಂಚಾಲಕಿ ಬೃಂದ ಆಡಿಗೆ  ಮಾತನಾಡಿ, ಜೀತ ಪದ್ಧತಿ ರಾಜ್ಯದಲ್ಲಿ ಇನ್ನು ಚಾಲ್ತಿಯಲ್ಲಿರುವುದು ನೋವಿನ ಸಂಗತಿಯಾಗಿದೆ. ಸಾಲದಾತ ಸಾಲಗಾರನನ್ನು ಜೀತಕ್ಕಿಟ್ಟುಕೊಳ್ಳುವುದು ಕಾನೂನು ಅಪರಾಧವಾಗುತ್ತದೆ. ನಮ್ಮ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ಗೌರವಯುತವಾಗಿ ಬದುಕಲು ಮೂಲಭೂತ ಹಕ್ಕುಗಳನ್ನು ನೀಡಲಾಗಿದೆ. ಮಾನವ ಹಕ್ಕುಗಳು ಉಲ್ಲಂಘನೆಯಾದರೆ ಕಾನೂನು ನೆರವು ಪಡೆಯಬೇಕು ಎಂದು ಸಲಹೆ ನೀಡಿದರು. 

     ಜೀತ ವಿಮುಕ್ತ ಕರ್ನಾಟಕ(ಜೀವಿಕ) ಸಂಘಟನೆಯ ಜಿಲ್ಲಾ ಸದಸ್ಯೆ ಚಿಕ್ಕಮ್ಮ ಮಾತನಾಡಿ, ಇಂತಹ ಕಾರ್ಯಕ್ರಮಗಳಲ್ಲಿ ಜೀತ ವಿಮುಕ್ತ ಕಾರ್ಮಿಕರಿಗೆ ಗೌರವಿಸುವ ಕೆಲಸವಾಗಬೇಕು ಎಂದು ಮನವಿ ಮಾಡಿದ ಅವರು, “ಅಮರ ವೀರ ಅಂಬೇಡ್ಕರ ಸಮರಗೈದೆ ಅಂದು-ಸ್ವಾತಂತ್ರ್ಯ , ಸ್ವಾಭಿಮಾನ, ಸಮಾನತೆ ಎಂದು” ಎಂಬ ಜಾಗೃತಿ ಗೀತೆಯನ್ನು ಹಾಡಿದರು. 

     ಜೀತ ಪದ್ಧತಿ ಕುರಿತು ಕಾರ್ಯಕ್ರಮದಲ್ಲಿ ಜೀತ ಪದ್ಧತಿಯಲ್ಲಿ ತೊಡಗಿಕೊಂಡಿದ್ದ ಕುಟುಂಬದವರು ಅಭಿನಯಿಸಿದ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು. 

     ಇದಕ್ಕೂ ಮುನ್ನ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ: ಬಾಬು ಜಗಜೀವನರಾಮ್ ಅವರ ಭಾವಚಿತ್ರಗಳಿಗೆ ಗಣ್ಯರಿಂದ ಪುಷ್ಪ ನಮನ ಸಲ್ಲಿಸಲಾಯಿತು. 

     ಉಪ ವಿಭಾಗಾಧಿಕಾರಿ, ಗೌರವ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಮಧುಗಿರಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ವಂದಿಸಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ನಿರೂಪಿಸಿದರು.

 ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜೇರಿ ಹಾಗೂ ಸಂಜೀವಪ್ಪ, ಯೋಜನಾ ನಿರ್ದೇಶಕ(ಡಿ.ಆರ್.ಡಿ.ಎ) ಎನ್. ನಾರಾಯಣ ಸ್ವಾಮಿ, ತಿಪಟೂರು ಉಪ ವಿಭಾಗಾಧಿಕಾರಿ ಸಪ್ತಶ್ರೀ, ತಹಶೀಲ್ದಾರ್ ರಾಜೇಶ್ವರಿ ಪಿ.ಎಸ್., ಮಧುಗಿರಿ ಡಿಡಿಪಿಐ ಗಿರಿಜಮ್ಮ, ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ, ವಿವಿಧ ತಾಲ್ಲೂಕಿನ ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜೀವಿಕ ಸಂಘಟನೆಯ ಜಿಲ್ಲಾ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X