ಹಾಡುಹಕ್ಕಿ ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ; ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

Date:

Advertisements

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಾಗಿದ್ದ ಹಿರಿಯ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ (88) ಗುರುವಾರ ನಿಧನರಾಗಿದ್ದಾರೆ.

ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ ಮರಳಿದ್ದ ಅವರು ಚೇತರಿಸಿಕೊಂಡಿದ್ದರು. ರಾತ್ರಿವರೆಗೆ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿದ್ದರು. ಅಂಕೋಲಾ ತಾಲೂಕಿನ ಬಡಿಗೆರಿ ಗ್ರಾಮದ ತಮ್ಮ ಮನೆಯಲ್ಲಿ ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಅಲಿಯಾಸ್ ಸುಕ್ರಿ ಬೊಮ್ಮಗೌಡ ಅವರು ಹಾಲಕ್ಕಿ ಜಾನಾಂಗ ಜಾನಪದ ಕೋಗಿಲೆ ಎಂದೇ ಪ್ರಸಿದ್ದಿ ಪಡೆದಿದ್ದರು. ಹಾಲಕ್ಕಿ ಜಾನಪದ ಹಾಡುಗಳ ಜೊತೆ ಮದ್ಯ ನಿಷೇಧ ಹೋರಾಟ ಸೇರಿದಂತೆ ಹಲವು ಹೋರಾಟದಲ್ಲಿ ಭಾಗಿಯಾಗಿದ್ದರು. ಅಂಕೋಲದ ಬಡಿಗೇರಿ ಗ್ರಾಮವನ್ನು ಮದ್ಯ ಮುಕ್ತ ಗ್ರಾಮವನ್ನಾಗಿ ಮಾಡಿದ್ದರು. ಜಾನಪದ‌ ಹಾಡುಗಳ ಮೂಲಕ ಸಮುದಾಯದ ಮಹಿಳೆಯ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದ ಸುಕ್ರಜ್ಜಿಗೆ 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿವೆ.

Advertisements

ಸಿಎಂ ಸೇರಿ ಗಣ್ಯರ ಸಂತಾಪ

ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ “ಸುಕ್ರಜ್ಜಿ” ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು. ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದುಃಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

“ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರು ಹಾಗೂ ಸುಕ್ರಜ್ಜಿ ಎಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ಮದ್ಯಪಾನ ವಿರೋಧಿ ಹೋರಾಟ ಸೇರಿ ಅನೇಕ ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಅವರ ನಾಲಗೆಯ ಮೇಲೆ ಐದು ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳು ನಲಿದಾಡುತ್ತಿದ್ದವು ಎಂದು ಕೇಳಿದ್ದೇನೆ. ಅವರ ಅಗಲಿಕೆ ರಾಜ್ಯದ ಸಾಂಸ್ಕೃತಿಕ, ಜನಪದ ಲೋಕಕ್ಕೆ ಬಹುದೊಡ್ಡ ನಷ್ಟ. ಅವರಿಗೆ ಸದ್ಗತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಸಂತಾಪ ಹೇಳಿದ್ದಾರೆ.

“ಕರ್ನಾಟಕದ ಹೆಮ್ಮೆ, ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರು ಇಂದು ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌. ಸುಕ್ರಿ ಬೊಮ್ಮ ಗೌಡ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ,ಅವರ ಕುಟುಂಬ ವರ್ಗಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ತಿಳಿಸಿದ್ದಾರೆ.

“ಜಾನಪದ ಗಾನಕೋಗಿಲೆ ‘ಪದ್ಮಶ್ರೀ ಪುರಸ್ಕೃತೆ’ ಸುಕ್ರಿ ಬೊಮ್ಮು ಗೌಡ ಅವರು ನಮ್ಮನ್ನೆಲ್ಲ ಅಗಲಿರುವ ಸುದ್ದಿ ತಿಳಿದು ಮನಸ್ಸಿಗೆ ದುಃಖ ಉಂಟಾಯಿತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಜನಿಸಿದ ಇವರು ತಮ್ಮ ಜಾನಪದ ಗಾಯನದ ಮೂಲಕ ಜಾನಪದ ಕ್ಷೇತ್ರದಲ್ಲಿ ಮೈಲುಗಲ್ಲು ಸೃಷ್ಟಿಸಿದ ಸುಕ್ರಿ ಗೌಡರನ್ನು ಕಳೆದುಕೊಂಡಿರುವುದು ಜಾನಪದ ಕ್ಷೇತ್ರಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಚಿವ ಮಂಕಾಳ ವೈದ್ಯ ಸಂತಾಪ ಸೂಚಿಸಿದ್ದಾರೆ.

“ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನವರಾದ, ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ ( ಸುಕ್ರಜ್ಜಿ) ನಿಧನದ ಸುದ್ದಿ ಬೆಳ್ಳಂಬೆಳಿಗ್ಗೆ ಬರಸಿಡಿಲು ಬಡಿದಂತಾಯಿತು. 5000ಕ್ಕೂ ಹೆಚ್ಚು ಹಾಲಕ್ಕಿ, ಜನಪದ ಹಾಡುಗಳನ್ನ ಕಂಠಪಾಠ ಮಾಡಿಕೊಂಡಿದ್ದ ಅಜ್ಜಿ, ‘ಜಾನಪದ ಕೋಗಿಲೆ’ ಎಂದೇ ಪ್ರಸಿದ್ದಳಾಗಿದ್ದರು. ಲೋಕಸಭಾ ಚುನಾವಣೆಯ ಸಂದರ್ಭ ಮಗಳಂತೆ ನನ್ನನ್ನ ಆತ್ಮೀಯವಾಗಿ ಮಾತನಾಡಿಸಿ, ಗಲ್ಲವನ್ನ ಹಿಡಿದು ಸವರಿದ ಆ ಕ್ಷಣ ಇನ್ನೂ ಹಸಿರಾಗೇ ಇದೆ. ಓಂ ಶಾಂತಿ” ಎಂದು ಕಾಂಗ್ರೆಸ್‌ ನಾಯಕಿ ಡಾ. ಅಂಜಲಿ ನಿಂಬಾಳ್ಕರ್‌ ಸಂತಾಪ ಸೂಚಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X