ಮೆಟ್ರೋ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್‌ ಎಂಡಿಗೆ ಕೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

Date:

Advertisements

‘ನಮ್ಮ ಮೆಟ್ರೋ’ ಪ್ರಯಾಣ ದರ ಏರಿಕೆಯ ಹೊರೆಗೆ ಮೆಟ್ರೋ ಪ್ರಯಾಣಿಕರು ಹೈರಾಣಾಗಿದ್ದು, ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ನ (BMRCL)ವ್ಯವಸ್ಥಾಪಕ ನಿರ್ದೇಶಕ ಎಂ. ಮಹಾಬಲೇಶ್ವರ ರಾವ್‌ ಜೊತೆ ಮಾತನಾಡಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, “ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಜಾರಿಯಲ್ಲಿ ಕೆಲವು ಸ್ಟೇಜ್‌ಗಳಲ್ಲಿ ದರಗಳು ದ್ವಿಗುಣಗೊಂಡಿವೆ. ಇದು ವೈಪರೀತ್ಯಗಳಿಗೆ ಕಾರಣವಾಗಿದೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿ, ಪ್ರಯಾಣಿಕರ ಹಿತ ಕಾಪಾಡಬೇಕು ಎಂದು ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೊ ರೈಲು ನಿಗಮ ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಕೆಲವು ಕಡೆಗಳಲ್ಲಿ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಮೆಟ್ರೋ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ” ಎಂದಿದ್ದಾರೆ.

Advertisements

ಪ್ರಯಾಣ ದರ ಏರಿಕೆ ಹೆಸರಲ್ಲಿ ಬೆಂಗಳೂರು ಮೆಟ್ರೋ (ನಮ್ಮ ಮೆಟ್ರೋ) ಅಕ್ಷರಶಃ ಹಗಲು ದರೋಡೆಗೆ ಇಳಿದಿದೆ. ಶೇ.47ರಷ್ಟು ದರ ಹೆಚ್ಚಳ ಎಂದು ಬಿಎಂಆರ್‌ಸಿಎಲ್‌ ಹೇಳಿದ್ದರೂ ಹಲವು ಕಡೆಗಳಲ್ಲಿ ಹಿಂದಿನ ದರದ ದುಪ್ಪಟ್ಟು ಶೇ.100ರಷ್ಟು ಅಧಿಕ ಮೊತ್ತ ನೀಡಬೇಕಾಗಿದೆ.

‘ನಮ್ಮ ಮೆಟ್ರೊ‘ ಪ್ರಯಾಣ ದರ ಏರಿಕೆ ಹೆಚ್ಚಳದಿಂದ ದೇಶದಲ್ಲಿಯೇ ಅತಿ ದುಬಾರಿ ಪ್ರಯಾಣ ದರವನ್ನು ಹೊಂದಿರುವ ರಾಜ್ಯ ಬೆಂಗಳೂರಿನ ಮೆಟ್ರೋದ್ದಾಗಿದೆ. ಪ್ರಯಾಣಿಕರಿಂದ ಪ್ರಯಾಣ ದರವನ್ನು ಪಡೆಯುವ ಬದಲು ಬೃಹತ್ ಆದಾಯ ಸಂಗ್ರಹದ ಉದ್ದೇಶದಿಂದ ದರ ಹೆಚ್ಚಳ ಮಾಡಲಾಗಿದೆ ಎಂಬ ಆರೋಪಕ್ಕೆ ನಿಗಮ ಗುರಿಯಾಗಿದೆ.‌

ಮೆಟ್ರೋ ದರ ಏರಿಕೆ ನಮ್ಮ ತೀರ್ಮಾನವಲ್ಲ

ಮೆಟ್ರೋ ಟಿಕೆಟ್ ದರ ಏರಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದೆ ಎನ್ನುವ ಬಿಜೆಪಿಯವರ ಆರೋಪದ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ “ಬಿಜೆಪಿಯವರಿಗೆ ರಾಜಕೀಯ ಹೊರತಾಗಿ ಬೇರೇನೂ ಗೊತ್ತಿಲ್ಲ. ಸುಳ್ಳು ಹೇಳುವುದು ಅವರ ಕಾಯಿಲೆ. ಮೆಟ್ರೋ ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಶೇ 50:50 ಅನುಪಾತದಲ್ಲಿ ಮಾಡಲಾಗಿರುತ್ತದೆ. ದರ ಏರಿಕೆಗೆ ಒಂದು ಸಮಿತಿ ಮಾಡಲಾಗಿದೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ಮಾಡಿರುತ್ತಾರೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೂ ಬರುವುದಿಲ್ಲ, ದರ ಏರಿಕೆ ತೀರ್ಮಾನ ಅವರು ಮಾಡಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ” ಎಂದು ಹೇಳಿದ್ದರು.

ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಎಮ್‌ಆರ್‌ಸಿಎಲ್‌ಗೆ ರಾಜ್ಯ ಸರ್ಕಾರವೇ ಸಲಹೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X