ಕೊಪ್ಪಳ | ಶಾಲೆಗಳಲ್ಲಿ ಬೋಧನಾ ಗುಣಮಟ್ಟ ಸುಧಾರಣೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮನವಿ

Date:

Advertisements

ಶಾಲೆಗಳಲ್ಲಿ ಬೋಧನಾ ಗುಣಮಟ್ಟದ ಸುಧಾರಣೆಗೆ ಪರಿಣಾಮಕಾರಿಯಾದಂತಹ ಕ್ರಮ ಕೈಗೊಳ್ಳಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಪಾಲಕರ ಹೋರಾಟ ಸಮಿತಿ ನೇತೃತ್ವದಲ್ಲಿ ಕೊಪ್ಪಳದ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು.
       
ಕೊಪ್ಪಳ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ, ಕನ್ನಡ ಮತ್ತು ಆಂಗ್ಲ ಮಾಧ್ಯಮದ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿಯಿಂದ ಸಾರ್ವತ್ರಿಕವಾಗಿ ಪ್ರತಿವರ್ಷವೂ ಶೈಕ್ಷಣಿಕ ಬೋಧನಾ ಗುಣಮಟ್ಟ ಕುಸಿಯುತ್ತಾ ಬಂದಿದೆ. ಪರಿಣಾಮ ಪ್ರೌಢ ಶಾಲೆಯಲ್ಲಿ ಕಾಣುತ್ತಿದೆ. ಕಳಪೆ ಗುಣಮಟ್ಟದ ಬೋಧನೆ ಮಾಡುತ್ತಿರುವುದರಿಂದ ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿಯುತ್ತಿದ್ದಾರೆ. ಅನರ್ಹ ಶಿಕ್ಷಕರಿಂದ ತಮ್ಮ ತರಗತಿಯ ಬೋಧನಾ ಅವಧಿಯಲ್ಲಿ ಮಕ್ಕಳಿಗೆ ಒಳಗೆ ನಡಿ, ಕೈ ಕಟ್, ಗಪ್ ಚುಪ್, ಬಾಯಿ ಮುಚ್, ಘಂಟೆ ಹೊಡೆ, ಹೊರ ನಡಿ ಅನ್ನುವಂತಾಗಬಾರದು ಎಂದು ಸಂಘಟನೆಗಳ ಮುಖಂಡರು ಮನವಿ ಮಾಡಿದರು.

ಕೆಲ ತಿಂಗಳುಗಳ ಹಿಂದೆ ನಡೆಸಿದ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 7,000ಕ್ಕೂ ಹೆಚ್ಚು ಆಯಾ ಮಾಧ್ಯಮಗಳಲ್ಲಿ ವಿದ್ಯಾರ್ಥಿಗಳು ಕಲಿತ ಕನ್ನಡ, ಆಂಗ್ಲ ಭಾಷೆ ಓದಲು, ಬರೆಯಲು ಬರುತ್ತಿಲ್ಲ ಎಂಬ ಸಂಗತಿ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ. ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಗಮನ ಕೊಟ್ಟು ಸಮರ್ಥವಾಗಿ ಬೋಧಿಸುವಂತೆ ಈ ಹಿಂದಿನ ಅಧಿಕಾರಿಗಳು ಸೂಚಿಸಿದ್ದರೂ ಕೆಲ ಶಿಕ್ಷಕರು ಅನುಷ್ಠಾನಗೊಳಿಸದೆ, ವಿದ್ಯಾರ್ಥಿಗಳನ್ನೆ ಹೊಣೆಗಾರರನ್ನಾಗಿ ಮಾಡಿ ತಮ್ಮ ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಾ ಬಂದಿದ್ದಾರೆ. ಮಕ್ಕಳ ಮನೋವಿಜ್ಞಾನ ಪುಸ್ತಕಗಳನ್ನು ಓದದ ಅಥವಾ ಓದಿಯೂ ವೈಜ್ಞಾನಿಕವಾಗಿ ಬೋಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮದ ಶಾಲೆಗಳಾಗಿದ್ದರೂ ಬಹುತೇಕ ವಿದ್ಯಾರ್ಥಿಗಳು ವ್ಯಾಕರಣಬದ್ಧವಾಗಿ ಕನ್ನಡವಾಗಲೀ ಆಂಗ್ಲ ಭಾಷೆಯನ್ನಾಗಲೀ ಕಲಿತಿಲ್ಲ ಅನ್ನೋದಕ್ಕಿಂತ ಕನ್ನಡ, ಆಂಗ್ಲ ಹಾಗೂ ಹಿಂದಿ ವಿಷಯಗಳನ್ನು ಸ್ಪಷ್ಟವಾಗಿ ಓದಲು ಬರೆಯಲು ಸಹ ಬಾರದ ಮಕ್ಕಳ ಸಂಖ್ಯೆ ಹೆಚ್ಚಿದೆ. ಆಯಾ ಶಾಲೆಗಳ ಮಕ್ಕಳ ಫಲಿತಾಂಶ ದಾಖಲೆಗಳನ್ನು ಪರಿಶೀಲಿಸಿ ಕಡಿಮೆ ಅಂಕ ಪಡೆದ ವಿಷಯಗಳ ಆಯಾ ಬೋಧಕರನ್ನು ತಕ್ಷಣ ಸೇವೆಯಿಂದ ತೆಗೆದು ಹಾಕಿ. ಉನ್ನತ ಅರ್ಹತಾ ಪದವಿಗಳನ್ನು ಪಡೆದ ಮಕ್ಕಳ ಮನೋವಿಜ್ಞಾನ ಓದಿ ತಿಳಿದುಕೊಂಡು ಗುಣಮಟ್ಟದಿಂದ ಬೋಧಿಸುವ ಶಿಕ್ಷಕರನ್ನು ನೇಮಕ ಮಾಡುವ ಮೂಲಕ ಮಕ್ಕಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ದೃಢವಾದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ವೃತ್ತಿಪರ ಹಾಸ್ಟೆಲ್‌ ನಿರ್ಮಾಣಕ್ಕೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹ

ಈ ವೇಳೆ ಶಾಲಾ ಪಾಲಕರ ಹೋರಾಟ ಸಮಿತಿ ಸಂಚಾಲಕ ಎಸ್ ಎ ಗಫಾರ್, ಸಂಘಟನಾ ಸಂಚಾಲಕ ಸುಂಕಪ್ಪ ಮೀಸಿ, ಭ್ರಾತೃತ್ವ ಸಮಿತಿ ಜಿಲ್ಲಾ ಸಹ ಸಂಚಾಲಕ ಚನ್ನಬಸಪ್ಪ ಅಪ್ಪಣ್ಣವರ್, ವಿಮುಕ್ತಿ ವಿದ್ಯಾ ಸಂಸ್ಥೆಯ ಕಾರ್ಯಕರ್ತ ವೀರೇಶ್ ತೆಗ್ಗಿನಮನಿ ಮುಂತಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X