ಗದಗ | ಪ್ರಬುದ್ಧ ರಾಷ್ಟ್ರ ನಿರ್ಮಾಣದಲ್ಲಿ ಅಂಬೇಡ್ಕ‌ರ್ ಪಾತ್ರ ಅವಿಸ್ಮರಣೀಯ: ಮಹೇಶ ಪೋತದಾರ

Date:

Advertisements

“ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡುವಲ್ಲಿ ಹಾಗೂ ಪ್ರಬುದ್ಧ ರಾಷ್ಟ್ರ ನಿರ್ಮಾಣದಲ್ಲಿ ಅಂಬೇಡ್ಕ‌ರ್ ಪಾತ್ರ ಅವಿಸ್ಮರಣೀಯ. ತಮ್ಮೆಲ್ಲರಿಗೂ ವಿದ್ಯಾಭ್ಯಾಸ, ಶಿಕ್ಷಣ ಓದು ಎಷ್ಟು ಮುಖ್ಯ ಎಂಬುದನ್ನು ಡಾ. ಅಂಬೇಡ್ಕರ್‌ನೋಡಿ ಅರಿಯಬೇಕಿದೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಹೇಳಿದರು.

ಗದಗ ಪಟ್ಟಣದ ಬುಧವಾರ ಆದರ್ಶ ಶಿಕ್ಷಣ ಸಂಸ್ಥೆಯ ವಾಣಿಜ್ಯ ಮಹಾವಿದ್ಯಾಲಯದ ಸಿಲ್ವರ್‌ಜುಬ್ಲಿ ಸಭಾಂಗಣದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ, ಆದರ್ಶ ಶಿಕ್ಷಣ ಸಂಸ್ಥೆಯ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮನುಷ್ಯರನ್ನು ಗುಲಾಮರನ್ನಾಗಿ ಮಾಡಿದವರನ್ನು ನಾವು ನೋಡಿದ್ದೇವೆ. ಆದರೆ ಗುಲಾಮರನ್ನು ರಾಜ ಮಹಾರಾಜರನ್ನಾಗಿಸಿದವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಎಂದು ಹೇಳಿದರು.

Advertisements

ಜಿಲ್ಲಾ ವಾರ್ತಾಧಿಕಾರಿ ವಸಂತ ಮತ್ತೂರ ಮಾತನಾಡಿ, ಸ್ವಾಭಿಮಾನ ನಮ್ಮತನ ಜೀವನದಲ್ಲಿ ಅಳವಡಿಕೊಳ್ಳುವ ಮೂಲಕ ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗೋಣ ಎಂದರು.

ಹುಲಕೋಟಿ ಜಿಸಿಟಿಎಂ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಅರ್ಜುನ್ ಗೋಳಸಂಗಿ ವಿಶೇಷ ಉಪನ್ಯಾಸ ನೀಡಿದರು. ಆದರ್ಶ ಶಿಕ್ಷಣ ಸಮಿತಿ ಅಧ್ಯಕ್ಷ ಕೆ.ವಿ.ಕುಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಆದರ್ಶ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಕೆ.ಗಿರಿರಾಜಕುಮಾರ್ ಸಂವಿಧಾನದ ಪ್ರಸ್ತಾವನೆ ಓದಿಸಿದರು. ಉಪಪ್ರಾಚಾರ್ಯ ಡಾ.ವಿ.ಟಿ.ನಾಯ್ಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ. ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವಿವಿಧ ಬೇಡಿಕೆಗಳ ಈಡೇರಿಸುವಂತೆ ಶಾಸಕ ಶ್ರೀನಿವಾಸ ಮಾನೆಗೆ ಮನವಿ

ಗದಗ ದಲಿತ ಕಲಾ ಮಂಡಳಿ ಅಧ್ಯಕ್ಷ ಶರೀಫ್ ಬೆಳೆಯಲಿ ಹಾಗೂ ಸಂಗಡಿಗರು ಅಂಬೇಡ್ಕರ್‌ಕುರಿತು ಗೀತೆ ಪ್ರಸ್ತುತ ಪಡಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಕುರಿತು ರಸಪ್ರಶ್ನೆ ಪ್ರಬಂಧ ಸ್ಪರ್ಧೆ, ಆಶುಭಾಷಣ, ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಾದವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಆದರ್ಶ ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಬಿ.ಪಿ. ಜೈನರ್ ನಿರೂಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X