ಬಳ್ಳಾರಿ | ಮುತ್ತೂಟ್ ಫಿನ್‌ಕಾರ್ಪ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

Advertisements

ಮುತ್ತೂಟ್ ಫಿನ್‌ಕಾರ್ಪ್ ಲಿ. ವತಿಯಿಂದ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ಜಾತ್ರೆ ಪ್ರಯುಕ್ತ ನಿನ್ನೆ ಮುಂಜಾನೆ ಗ್ರಾಹಕರಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ರಕ್ತಪರೀಕ್ಷೆ, ಮಧುಮೇಹ, ಸಕ್ಕರೆ ಪ್ರಮಾಣ, ಕಣ್ಣು ಮತ್ತು ದಂತ ತಪಾಸಣೆ ಸೇರಿದಂತೆ ಹಲವು ರೀತಿಯ ಆರೋಗ್ಯ ತಪಾಸಣೆ ನಡೆಸಲಾಯಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬ್ರ್ಯಾಂಚ್ ಮ್ಯಾನೇಜರ್ ವೇದಾವತಿ ಎ, “ದೈನಂದಿನ ಕೆಲಸದ ಒತ್ತಡದಿಂದ ಜನರು ತಮ್ಮ ಆರೋಗ್ಯವನ್ನೇ ನಿರ್ಲಕ್ಷಿಸುತ್ತಿದ್ದಾರೆ. ಇದರಿಂದ ಪ್ರಾಥಮಿಕ ಹಂತದಲ್ಲಿ ರೋಗವನ್ನು ಪತ್ತೆ ಹಚ್ಚಲು ಸಾಧ್ಯವಾಗದೆ ರೋಗ ಉಲ್ಬಣಗೊಂಡು ಸಾವು ಸಂಭವಿಸಿದ ಉದಾಹರಣೆಗಳು ಸಾವಿರಾರಿವೆ. ಇಂತಹ ಸಂದರ್ಭದಲ್ಲಿ ಬಡಜನರ ಅನುಕೂಲಕ್ಕಾಗಿ ಈ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಯಾರೊಬ್ಬರೂ ಆರೋಗ್ಯವನ್ನು ನಿರ್ಲಕ್ಷಿಸದೇ ಸಕಾಲಕ್ಕೆ ತಪಾಸಣೆಗೊಳಪಟ್ಟು ರೋಗದಿಂದ ದೂರವಿರಬೇಕು. ಆರೋಗ್ಯಯುತ ಜೀವನ ನಡೆಸುವಂತಾಗಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಜೀತ ಪದ್ಧತಿ ನಿರ್ಮೂನೆಗೆ ಪ್ರತಿಯೊಬ್ಬರೂ ಪಣತೊಡಬೇಕು: ನ್ಯಾ. ಕೆ ಜಿ ಶಾಂತಿ ಕರೆ

Advertisements

ಮತ್ತೂಟ್ ಫಿನ್‌ಕಾರ್ಪ್ ಸಂಸ್ತೆಯ ವಿಭಾಗೀಯ ವ್ಯವಸ್ಥಾಪಕ ಪ್ರಶಾಂತ್ ಎಸ್, ಪ್ರಾದೇಶಿಕ ವ್ಯವಸ್ಥಾಪಕ ವಿರೂಪಾಕ್ಷಪ್ಪ ಪಿ, ಸಹಾಯಕ ವ್ಯವಸ್ಥಾಪಕ ಕಿಶೋರ್ ಕುಮಾರ್, ಹಣಕಾಸು ಅಧಿಕಾರಿ ಶ್ರೀನಿವಾಸ್ ಯು ಮತ್ತು ಸಿಬ್ಬಂದಿ ಪ್ರವೀಣ್ ಕುಮಾರ್, ಶ್ರೀಕಾಂತ್ ಮತ್ತು ಹೆಲ್ತ್ ಫ್ರೀ ಸರ್ವಿಸಸ್ ಸಂಸ್ಥೆಯ ಫೌಂಡರ್ ಡಾ. ಕುಮಾರ್, ಬಳ್ಳಾರಿ ಮ್ಯಾನೇಜರ್ ಮಂಜುನಾಥ್ ಡಿ.ಪಿ, ಸಬೀಯಾ, ಹೊನ್ನಪ್ಪ, ದಂತವೈದ್ಯ ಸುರೇಶ್ ಸೇರಿದಂತೆ ಇತರರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X