ಡಬಲ್‌ ಆದ ಕಡೆ ಮೆಟ್ರೋ ದರ ಇಳಿಕೆ: ಬಿಎಂಆರ್‌ಸಿಎಲ್‌ ಎಂಡಿ ಮಹೇಶ್ವರ್‌ ರಾವ್‌

Date:

Advertisements

‘ನಮ್ಮ ಮೆಟ್ರೋ’ ದರ ಏರಿಕೆ ಕುರಿತು ತೀವ್ರ ಜನಾಕ್ರೋಶ ವ್ಯಕ್ತವಾದ ಬಳಿಕ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (BMRCL) ಎಚ್ಚೆತ್ತುಕೊಂಡಿದೆ. ಈ ಮೂಲಕ ದರ ದುಪ್ಪಟ್ಟಾದ ಕಡೆಗಳಲ್ಲಿ ಪರಿಷ್ಕರಣೆ ನಡೆಸುತ್ತೇವೆ ಎಂದು ಬಿಎಂಆರ್‌ಸಿಎಲ್‌ ಎಂಡಿ ಮಹೇಶ್ವರ್‌ ರಾವ್‌ ತಿಳಿಸಿದ್ದಾರೆ.

ಗುರುವಾರ ದಿಢೀರ್‌ ಸುದ್ದಿಗೋಷ್ಠಿ ಕರೆದು ದರ ಇಳಿಕೆ ಬಗ್ಗೆ ಸುಳಿವು ನೀಡಿದ ಅವರು, “ಪ್ರಯಾಣಿಕರ ಹಿತಕ್ಕಾಗಿ ಮೆಟ್ರೋ ದರ ಇಳಿಕೆ ಮಾಡುತ್ತೇವೆ. ಎಲ್ಲೆಲ್ಲಿ ದರ ಡಬಲ್‌ ಆಗಿದೆ, ಅಲ್ಲಿ ದರ ಇಳಿಕೆ ಮಾಡುತ್ತೇವೆ. ಉಳಿದಂತೆ ಶೇ.47ರಷ್ಟು ದರ ಹೆಚ್ಚಳ ಯತಾತ್ಥಿತಿಯಲ್ಲಿರುತ್ತದೆ” ಎಂದರು.

“ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ. 90 ರಿಂದ ಶೇ 100 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು. ಶೇ 60 ದರ ಹೆಚ್ಚಳವಾಗಿರುವಲ್ಲಿ ಸ್ಲ್ಯಾಬ್ ಮರ್ಜ್ ಮಾಡುತ್ತೇವೆ. ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ” ಎಂದು ಹೇಳಿದರು.

Advertisements

“ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡುವುದಕ್ಕೆ ಒಂದು ವಿಧಾನ ಇದೆ. ಅದರಂತೆಯೇ ದರ ನಿಗದಿ ಸಮಿತಿ ಅಧ್ಯಯನ ನಡೆಸಿ ಮಾಡಿದ ಶಿಫಾರಸಿನ ಮೇರೆಗೆ ದರ ಹೆಚ್ಚಳ ಮಾಡಲಾಗಿದೆ. ದರ ಏರಿಕೆಗೆ ಪ್ರಯಾಣಿಕರ ವಿರೋಧ ಹಿನ್ನೆಲೆಯಲ್ಲಿ ಸಭೆ ಮಾಡಲಾಗಿದೆ. ಕಳೆದ 3 ದಿನಗಳಿಂದ ಬೋರ್ಡ್ ಜೊತೆ ಸಭೆ ನಡೆಸಿದ್ದೇವೆ. ಸಿಎಂ ಹಾಗೂ ಡಿಸಿಎಂ ಸೂಚನೆ ಮೇರೆಗೆ ಸಭೆ ಮಾಡಿದ್ದೇವೆ. ಎಲ್ಲಿ ಅನಿವಾರ್ಯವೋ ಅಲ್ಲಿ ದರ ಇಳಿಕೆ ಮಾಡಬೇಕಾಗುತ್ತದೆ. ಯಾವ ನಿಲ್ದಾಣದಿಂದ ಯಾವ ನಿಲ್ದಾಣಕ್ಕೆ ದುಪ್ಪಟ್ಟು ದರ ಏರಿಕೆಯಾಗಿದೆಯೋ ಅಲ್ಲಿ ಕಡಿಮೆ ಮಾಡಲು ಪ್ರಯತ್ನಿಸಲಾಗುವುದು. ಮೆಟ್ರೋಗೆ ಸಾಕಷ್ಟು ಬಂಡವಾಳ ಹೂಡಿಕೆ ಮಾಡಲಾಗಿದೆ. ಮೆಟ್ರೋ ಸಿಬ್ಬಂದಿ ವೇತನ, ಇತ್ಯಾದಿ ವಿಚಾರಗಳನ್ನೂ ದರ ಏರಿಕೆ ವೇಳೆ ಗಣನೆಗೆ ತೆಗೆದುಕೊಳ್ಳಲಾಗಿದೆ” ಎಂದರು.

ಮೆಟ್ರೋ ಪ್ರಯಾಣ ದರ ಏರಿಕೆಯ ಹೊರೆಗೆ ಮೆಟ್ರೋ ಪ್ರಯಾಣಿಕರು ಹೈರಾಣಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಿಗ್ಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ನ (BMRCL)ವ್ಯವಸ್ಥಾಪಕ ನಿರ್ದೇಶಕ ಎಂ. ಮಹಾಬಲೇಶ್ವರ ರಾವ್‌ ಜೊತೆ ಮಾತನಾಡಿ ದರ ಇಳಿಕೆ ಸೂಚನೆ ನೀಡಿದ್ದರು.

ಈ ಕುರಿತು ಎಕ್ಸ್‌ ತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದ ಸಿದ್ದರಾಮಯ್ಯ, “ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಜಾರಿಯಲ್ಲಿ ಕೆಲವು ಸ್ಟೇಜ್‌ಗಳಲ್ಲಿ ದರಗಳು ದ್ವಿಗುಣಗೊಂಡಿವೆ. ಇದು ವೈಪರೀತ್ಯಗಳಿಗೆ ಕಾರಣವಾಗಿದೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿ, ಪ್ರಯಾಣಿಕರ ಹಿತ ಕಾಪಾಡಬೇಕು ಎಂದು ಸೂಚಿಸಿದ್ದೇನೆ” ಎಂದಿದ್ದರು.

“ಬೆಂಗಳೂರು ಮೆಟ್ರೊ ರೈಲು ನಿಗಮ ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಕೆಲವು ಕಡೆಗಳಲ್ಲಿ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಮೆಟ್ರೋ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತರಲಾಗಿದೆ” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X