ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಫೆ.15ರ ಶನಿವಾರ ಅರಿವು ಭಾರತ ಸಮಾಜ ಸುಧಾರಣೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನದಾಸ್ ಅವರು ಬೆಳಗ್ಗೆ 10ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಒಳ-ಹೊರಗು: ಹತ್ತು ವರ್ಷಗಳ ನೆನಪಿನ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಫೋಟೋ ಪ್ರದರ್ಶನಕ್ಕೆ ಉದ್ಘಾಟನೆ ನೀಡಲಿದ್ದು, ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ.ತ್ರಿಲೋಕಚಂದ್ರ ಅವರು ಅರಿವು ಅಭಿಯಾನದ ಕುರಿತು ಮಾತನಾಡಲಿದ್ದು, ಪ್ರಜಾವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾದ ಕೆ.ನರಸಿಂಹ ಮೂರ್ತಿ ಅವರು ಒಳ-ಹೊರಗು ಕೃತಿ ಕುರಿತು ಮಾತನಾಡಲಿದ್ದಾರೆ.
ಮಾಲೂರು ಶಾಸಕ ಕೆ ವೈ ನಂಜೇಗೌಡ, ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್, ವಿಪ ಸದಸ್ಯರಾದ ನಸೀರ್ ಅಹಮದ್, ಅನಿಲ್ ಕುಮಾರ್, ಪ್ರಗತಿಪರ ಚಿಂತಕರಾದ ಅನಂತ್ ನಾಯಕ್, ದಸಂಸ ಮುಖಂಡ ವಿಜಯ್ ಕುಮಾರ್, ಭೀಮಸೇನೆ ರಾಜ್ಯಾಧ್ಯಕ್ಷ ಪಂಡಿತ್ ಮುನಿವೆಂಕಟಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅರಿವು ಭಾರತ ಸಂಸ್ಥೆಯ ಮುಖ್ಯಸ್ಥರಾದ ಅರಿವು ಶಿವಪ್ಪ ಅವರು ಸಮಾರಂಭದ ಕುರಿತು ಆಶಯ ನುಡಿಗಳನ್ನಾಡಲಿದ್ದಾರೆ.
ಇದನ್ನೂ ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಟ್ರೋ ದರ ಏರಿಕೆ- ‘ಸತ್ತಂತೆಯೂ ಅತ್ತಂತೆಯೂ’ ಆಡುತ್ತಿರುವ ಈ ನಾಟಕ ನಿಲ್ಲಲಿ
ಮಧ್ಯಾಹ್ನ 2 ಗಂಟೆಗೆ ಅಸ್ಪೃಶ್ಯ ಆಚರಣೆಗಳು ಮತ್ತು ನಿವಾರೋಪಾಯಗಳು ಹಾಗೂ ಅಸ್ಪೃಶ್ಯತೆ ನಿರ್ಮೂಲನೆಯಲ್ಲಿ ಯುವಜನರ ಪಾತ್ರ ಕುರಿತ ವಿಚಾರಗೋಷ್ಠಿಗಳು ನಡೆಯಲಿದ್ದು, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧ್ಯಕ್ಷತೆವಹಿಸಲಿದ್ದಾರೆ. ನಂತರ 3.30ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.