ಪ್ರೊ.ಮಾಧವ ಗಾಡ್ಗೀಳ್ ಆತ್ಮಕಥೆ ‘ಏರುಘಟ್ಟದ ನಡಿಗೆ’ ಕೃತಿ ಲೋಕಾರ್ಪಣೆ

Date:

Advertisements

ಪ್ರೊ.ಮಾಧವ ಗಾಡ್ಗೀಳ್ ಅವರ ಆತ್ಮಕತೆ ‘A Walk up the Hill’ನ ಕನ್ನಡ ಅನುವಾದ ‘ಏರುಘಟ್ಟದ ನಡಿಗೆ’ ಕೃತಿಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಲೋಕಾರ್ಪಣೆಗೊಳಿಸಿದರು.

ಪ್ರೊ.ಗಾಡ್ಗೀಳ್ ಅವರ ಆತ್ಮಕಥೆಯನ್ನು ಕನ್ನಡಕ್ಕೆ ಪತ್ರಕರ್ತ, ಪರಿಸರ ಪ್ರೇಮಿ ನಾಗೇಶ್ ಹೆಗಡೆ ಹಾಗೂ ಶಾರದಾ ಗೋಪಾಲ ಅನುವಾದಿಸಿದ್ದಾರೆ. ಆಕೃತಿ ಆಶಯ ಪಬ್ಲಿಕೇಷನ್ ಈ ಪುಸ್ತಕ ಪ್ರಕಟಿಸಿದೆ.

ಚಿತ್ರಕಲಾ ಪರಿಷತ್ತಿನಲ್ಲಿ ಗುರುವಾರ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಈಶ್ವರ ಖಂಡ್ರೆ, “ನಾವೆಲ್ಲರೂ ಸಾಮಾನ್ಯವಾಗಿ ಪರಿಸರ ಎಂದರೆ ಮರ, ಗಿಡ, ಕಾಡು, ಮೇಡು, ವನ್ಯಜೀವಿಗಳಿಗಷ್ಟೇ ಸೀಮಿತವಾಗುತ್ತೇವೆ. ಆದರೆ ಪ್ರೊ. ಗಾಡ್ಗೀಳ್ ಅವರು ಪರಿಸರ ವಿಜ್ಞಾನಿಯಾಗಿ ಪರಿಸರವನ್ನು ನೋಡಿರುವ ದೃಷ್ಟಿಕೋನವೇ ಬೇರೆ ಇದೆ. ಅವರು ಪರಿಸರವನ್ನು ಕಲ್ಲು ಮಣ್ಣಿನಿಂದ ಕೂಡಿದ ಭೂಮಿ, ಬೆಟ್ಟ, ಗುಡ್ಡ, ಈ ಭೂಮಿಯಲ್ಲಿ ಬೆಳೆಯುವ ಸಕಲ ಜೀವರಾಶಿ, ಸಸ್ಯ ಸಂಕುಲ, ಪಕ್ಷಿ ಸಂಕುಲ, ಕೀಟ ಸಂಕುಲ, ಸೂಕ್ಷ್ಮಾಣು ಜೀವಿಗಳು, ನದಿ ಮೂಲಗಳು, ಅರಣ್ಯವಾಸಿಗಳು, ನಾಗರಿಕತೆಯವರೆಗೆ ತಮ್ಮ ವ್ಯಾಪ್ತಿಯನ್ನು ಹಿಗ್ಗಿಸಿಕೊಂಡು ಅಧ್ಯಯನ ನಡೆಸಿದರು.
ಹೀಗಾಗಿಯೇ ಇವರಿಗೆ ವಿಶ್ವಸಂಸ್ಥೆ ಚಾಂಪಿಯನ್ಸ್ ಆಫ್ ದಿ ಅರ್ಥ್ ಪ್ರಶಸ್ತಿ ನೀಡಿ ಗೌರವಿಸಿದೆ” ಎಂದು ಹೇಳಿದರು.

Advertisements

“ಪಶ್ಚಿಮ ಘಟ್ಟ ಕುರಿತಂತೆ ಮಾಧವ ಗಾಡ್ಗೀಳ್ ನೇತೃತ್ವದ ಸಮಿತಿ 31.08.2011ರಂದು ನೀಡಿರುವ ವರದಿ, ಅವರೆಲ್ಲರೂ ಕೈಗೊಂಡ ಅಧ್ಯಯನ ಪಶ್ಚಿಮಘಟ್ಟದ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದೆ. ವರದಿ ಸಂಪೂರ್ಣವಾಗಿ ಜಾರಿಗೆ ಬಾರದೆ ಇರಬಹುದು. ಆದರೆ 2012ರ ಜುಲೈನಲ್ಲಿ ಪಶ್ಚಿಮಘಟ್ಟವನ್ನು ಸಂರಕ್ಷಿತ ಪ್ರದೇಶ ಎಂದು ಯುನೆಸ್ಕೋ ಘೋಷಿಸಲು ಇದು ಸಹಕಾರಿಯಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದರು.

“ಕಳೆದ 20 ತಿಂಗಳುಗಳಲ್ಲಿ ಬೆಂಗಳೂರು ನಗರ ಒಂದರಲ್ಲೇ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 117 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದೆ. ರಾಜ್ಯಾದ್ಯಂತ 5 ಸಾವಿರ ಎಕರೆ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದ್ದು, ತೆರವು ಮಾಡಿಸಲಾದ ಎಲ್ಲ ಅರಣ್ಯ ಭೂಮಿಯಲ್ಲಿ ಗಡಿ ಗುರುತಿಗೆ ಕಂದಕ ತೋಡಿ, ಗಿಡ ನೆಡಲಾಗಿದೆ. ಮತ್ತೆ ಒತ್ತುವರಿ ಆಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ” ಎಂದು ಖಂಡ್ರೆ ತಿಳಿಸಿದರು.

“ಡಾ. ಕಸ್ತೂರಿ ರಂಗನ್ ಸಮಿತಿಯ ವರದಿಯಲ್ಲಿ ಕರ್ನಾಟಕದ ಪಶ್ಚಿಮಘಟ್ಟ ಪ್ರದೇಶ 20,668 ಚ.ಕಿ.ಮೀ. ಪರಿಸರ ಸೂಕ್ಷ್ಮ ಎಂದು ಗುರುತಿಸಿದೆ. ರಾಜ್ಯ ಈಗಾಗಲೇ 16,114 ಚದರ ಕಿ.ಮೀ. ಸಂರಕ್ಷಿಸಿದ್ದು, ಕಸ್ತೂರಿ ರಂಗನ್ ವರದಿಯಲ್ಲಿ ನಮೂದಿಸಿರುವ ವ್ಯಾಪ್ತಿಯ ಶೇ. 83ರಷ್ಟು ಆಗಿರುತ್ತದೆ. ಉಳಿದ 4 ಸಾವಿರ ಚ.ಕಿ.ಮೀ ಅಂದರೆ ಶೇ. 17ರಷ್ಟು ಪ್ರದೇಶದಲ್ಲಿ 39 ತಾಲೂಕುಗಳ ಸುಮಾರು 1449 ಗ್ರಾಮಗಳಿದ್ದು, ಇಲ್ಲಿ ಶಾಲೆ, ಆಸ್ಪತ್ರೆ, ಅಂಗನವಾಡಿ, ವಸತಿ ಪ್ರದೇಶಗಳಿವೆ. ಹೀಗಾಗಿ ಜೀವನ, ಜೀವನೋಪಾಯ ಮತ್ತು ಪರಿಸರ ಸಂರಕ್ಷಣೆ ಎಲ್ಲವನ್ನೂ ಸಮತೋಲಿತವಾಗಿ ತೆಗೆದುಕೊಂಡು ಹೋಗಲಾಗುತ್ತಿದೆ” ಎಂದು ಹೇಳಿದರು.

ಶಿಕ್ಷಣ ತಜ್ಞ ಪ್ರೊ. ಕೆ.ಈ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ನಾಗೇಶ್ ಹೆಗಡೆ, ಪರಿಸರ ಚಿಂತಕ ಡಾ. ನರೇಂದ್ರ ರೈ ದೇರ್ಲ, ಕ್ಯಾಪ್ಟನ್ ಜಿ.ಆರ್. ಗೋಪಿನಾಥ್, ಆರ್.ಪಿ.ಇ. ಸೊಸೈಟಿ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಆಕೃತಿ ಆಶಯ ಪ್ರಕಾಶನದ ಕಲ್ಲೂರು ನಾಗೇಶ್ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X