ಉದ್ಯೋಗಾವಕಾಶ: ಬೆಂಗಳೂರಿನಲ್ಲಿ ನಡೆಯಲಿದೆ ‘ಬೃಹತ್ ಉದ್ಯೋಗ ಮೇಳ’

Date:

Advertisements

ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ಯುವಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು, ನಾನಾ ಕಂಪನಿಗಳ ಸಂದರ್ಶನವನ್ನು ಒಂದೇ ಸ್ಥಳದಲ್ಲಿ ಎದುರಿಸಲು ಅವಕಾಶ ಮಾಡಿಕೊಡಲು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ‘ಪ್ರೆಸಿಡೆನ್ಸ್‌ ಫೌಂಡೇಷನ್’ ಮುಂದಾಗಿದೆ. ಫೆಬ್ರವರಿ 15ರಂದು ಬೆಂಗಳೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’ವನ್ನು ಆಯೋಜಿಸಿದೆ.

ಉದ್ಯೋಗ ಮೇಳವು ಬೆಂಗಳೂರಿನ ಬೆನ್ಸನ್‌ ಟೌನ್‌ನ ಖುದ್ದೂಸ್ ಸಾಹಿಬ್ ಈದ್ಗಾ ಮೈದಾನದಲ್ಲಿ ಫೆಬ್ರವರಿ 15ರ ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ನಡೆಯಲಿದೆ ಎಂದು ಪ್ರೆಸಿಡೆನ್ಸಿ ಫೌಡೇಷನ್ ತಿಳಿಸಿದೆ.

ಉದ್ಯೋಗ ಮೇಳಕ್ಕೆ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಉದ್ಯೋಗ ಮತ್ತು ತರಬೇತಿ ಇಲಾಖೆ, ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗಗಳು ಸಹಯೋಗ ನೀಡಿವೆ. ಹೀಗಾಗಿ, ಅನೇಕ ಕಂಪನಿಗಳು, ಸಂಸ್ಥೆಗಳು ಹಾಗೂ ನಾನಾ ಉದ್ಯೋಗದಾರರು ಸೇರಿದಂತೆ 200ಕ್ಕೂ ಹೆಚ್ಚು ಸಂಸ್ಥೆಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ.

Advertisements
WhatsApp Image 2025 02 12 at 10.41.24 AM

ಉದ್ಯೋಗ ಮೇಳದಲ್ಲಿ ಯಾವುದೇ ಜಾತಿ, ಧರ್ಮದವರು ಭಾವಹಿಸಬಹುದು. ಅಭ್ಯರ್ಥಿಗಳು 18ರಿಂದ 35 ವರ್ಷ ವಯೋಮಾನದವರಾಗಿರಬೇಕು. ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಸಂದರ್ಶನ, ಇಂಟರ್ನ್‌ಶಿಪ್, ಅಪ್ರೆಂಟಿಸ್ ಹಾಗೂ ನೇರ ನೇಮಕಾತಿಯ ಮೂಲಕ ಉದ್ಯೋಗಗಳನ್ನು ಒದಗಿಸಲಾಗುತ್ತದೆ ಎಂದು ಫೌಂಡೇಷನ್ ಮಾಹಿತಿ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X