ಚಾಮರಾಜನಗರ | ಫೆ.21 ರಂದು ರಾಜ್ಯಮಟ್ಟದ ಜಾನಪದ ಜಾತ್ರೆ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

Date:

Advertisements

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಉಪ ಯೋಜನೆಯಡಿ ವಿವಿಧ ಪ್ರಕಾರದ ಜಾನಪದ ಕಲೆಗಳ ಪ್ರದರ್ಶನವಾದ ‘ಜಾನಪದ ಜಾತ್ರೆ’ ರಾಜ್ಯಮಟ್ಟದ ಕಾರ್ಯಕ್ರಮವನ್ನು ಇದೇ ಫೆ.21ರಂದು ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿದ್ದು, ಇದಕ್ಕೆ ಸಕಲ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚಿಸಿದರು.

ಚಾಮರಾಜ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾನಪದ ಜಾತ್ರೆ ರೂಪುರೇಷೆಗಳ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ, “ಪರಿಶಿಷ್ಟ ಜಾತಿ ಸಮುದಾಯದಲ್ಲಿ ಇರುವ ಕಲೆಗಳನ್ನು ಪುನಶ್ಚೇತನಗೊಳಿಸಿ ಮತ್ತು ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಜಾನಪದ ಜಾತ್ರೆ ಶೀರ್ಷಿಕೆಯಡಿಯಲ್ಲಿ ರಾಜ್ಯ ಸರ್ಕಾರ ವಿವಿಧ ಪ್ರಕಾರದ ಜಾನಪದ ಕಲೆಗಳನ್ನು ಒಂದೇ ಸೂರಿನಡಿ ತಂದು ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ರಾಜ್ಯದ ವಿವಿಧ ಜಾನಪದ ಕಲಾತಂಡಗಳನ್ನು ಗುರುತಿಸಿ 40 ರಿಂದ 45 ವಿವಿಧ ಕಲಾ ಪ್ರಕಾರಗಳ ತಂಡಗಳಿಗೆ ತರಬೇತಿ ಮತ್ತು ಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

“ಜಿಲ್ಲೆಯ ಜಾನಪದ ಕಲಾವಿದರಿಗೂ ಹೆಚ್ಚಿನ ಅವಕಾಶ ಹಾಗೂ ಆದ್ಯತೆ ನೀಡಬೇಕು. ರಾಜ್ಯದ ವಿವಿಧ ಭಾಗಗಳಿಂದ ಅಂದಾಜು 500 ಕಲಾವಿದರು ಭಾಗವಹಿಸುವ ನಿರೀಕ್ಷೆಯಿದೆ. ಈ ಎಲ್ಲ ಕಲಾವಿದರಿಗೆ ವಾಸ್ತವ್ಯ, ಊಟ, ಉಪಹಾರ ಸೇರಿದಂತೆ ಎಲ್ಲ ಅಗತ್ಯ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಒದಗಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

Advertisements

“ಕಲಾ ಪ್ರದರ್ಶನಕ್ಕೆ ಬೃಹತ್ ವೇದಿಕೆ, ಉತ್ತಮ ಧ್ವನಿವರ್ಧಕ, ಬೆಳಕು, ವಿನ್ಯಾಸ ಇರಬೇಕು. ಎಲ್ಲವೂ ಗುಣಮಟ್ಟದ್ದಾಗಿರಬೇಕು. ಕಲಾವಿದರು ಪ್ರದರ್ಶನ ನೀಡಿದ 24 ಗಂಟೆಯೊಳಗೆ ಸಂಭಾವನೆ ಕಲಾವಿದರ ಬ್ಯಾಂಕ್ ಖಾತೆಗೆ ಜಮೆಯಾಗಬೇಕು. ಕಲಾ ಪ್ರದರ್ಶನ ಹಾಗೂ ತಾಲೀಮಿಗಾಗಿ ಕಲಾವಿದರು ಮುಂಚಿತವಾಗಿಯೇ ಆಗಮಿಸಲಿದ್ದಾರೆ. ಇದಕ್ಕೂ ಸೂಕ್ತ ಏರ್ಪಾಟು ಮಾಡಬೇಕು” ಎಂದರು.

“ಜಾನಪದ ಜಾತ್ರೆ ಸುಸೂತ್ರವಾಗಿ ನಡೆಯಲು ವಿವಿಧ ಸಮಿತಿಗಳನ್ನು ನೇಮಕ ಮಾಡಿ ಜವಾಬ್ದಾರಿ ನೀಡಲಾಗುತ್ತದೆ. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಣ ಇನ್ನಿತರ ಪ್ರಕ್ರಿಯೆಗಳು ಕೈಗೊಳ್ಳಬೇಕಿದೆ. ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ರಾಜ್ಯಮಟ್ಟದ ಜಾನಪದ ಜಾತ್ರೆ ಯಶಸ್ವಿಗೊಳಿಸಲು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಿ” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಭಾರತೀಯ ಅಂಚೆ ಇಲಾಖೆಯಿಂದ ವಿಶೇಷ ಉಡುಗೊರೆ; ನಟ ಡಾಲಿ ಧನಂಜಯ ಸಂತಸ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಲೈ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ ಈ ರಘು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ ಎನ್ ಮಲ್ಲಿಕಾರ್ಜುನ ಸ್ವಾಮಿ, ಚಾಮರಾಜ ನಗರ ಜಿಲ್ಲೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್, ಜಾನಪದ ಜಾತ್ರೆ ಕಾರ್ಯಕ್ರಮದ ಪ್ರಧಾನ ನಿರ್ದೇಶಕ ಕುಂತೂರು ಕುಮಾರ್, ನಿರ್ದೇಶಕ ಹನುಮಂತ ನಾಯಕ, ಸಂಚಾಲಕ ಡಾ ಸಬ್ಬನಹಳ್ಳಿ ರಾಜು, ಕೆ ನಾಗರಾಜು, ಹೆಚ್ ಸಿ ನಿಂಗರಾಜು, ಬಿ ಅನಿಲ್ ಕುಮಾರ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಯೋಗಾನಂದ್, ಹನೂರು ತಹಶೀಲ್ದಾರ್ ಗುರುಪ್ರಸಾದ್, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X