ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಪತ್ನಿ ವ್ಯೆದ್ಯರ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಾನ್ವಿ ತಾಲೂಕಿನ ಕಂಬಳನೆತ್ತಿ ಗ್ರಾಮದ ವಿರುಪಾಕ್ಷಪ್ಪ (49) ಸಾವನ್ನಪ್ಪಿದ ವ್ಯಕ್ತಿ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವಿರುಪಾಕ್ಷಪ್ಪ ರಾಯಚೂರು ನಗರದ ರಾಜೀವ್ ಗಾಂಧಿ ಓಪೆಕ್ ಆಸ್ಪತ್ರೆಯಲ್ಲಿ ಕಳೆದ ಡಿಸೆಂಬರ್ 7 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಡಿಸೆಂಬರ್ 10 ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ರೋಗಿಗೆ ಉಸಿರಾಟದ ತೊಂದರೆಗೆ ಒಳಗಾಗಿ ಫೆ.8 ರಂದು ಪುನಃ ಅದೇ ಆಸ್ಪತ್ರೆಗೆ ಹೋದಾಗ ಡಾ.ಪ್ರದೀಪ್ ಕುಲಕರ್ಣಿ ಅವರು ಊರಲ್ಲಿ ಇಲ್ಲ ಎಂದು ವೈದ್ಯ ಸಿಬ್ಬಂದಿ ಬೇರೆ ಆಸ್ಪತ್ರೆಗೆ ಹೋಗುವಂತೆ ಸಲಹೆ ನೀಡಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಫೆ.9ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಸಾಂಸ್ಕೃತಿಕ ಅಧ್ಯಯನವು ಆಧುನಿಕ ಸಂಶೋಧನೆಯ ಭಾಗ : ದುಶಾನ್ ಡೀಕ್
ಸೂಕ್ತ ಚಿಕಿತ್ಸೆ ನೀಡಲು ವೈದ್ಯರ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ನನ್ನ ಪತ್ನಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತ ಪತ್ನಿ ಸೋಮೇಶಮ್ಮ ಅವರು ನೀಡಿದ ದೂರಿನ ಮೇರೆ ರಾಯಚೂರು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
