ಹೊಲದಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮೌನೇಶ್ ನಿಂಗಪ್ಪ (35) ಮೃತಪಟ್ಟ ವ್ಯಕ್ತಿ. ಸಂಜೆ ಹೊಲಕ್ಕೆ ಪೈಪ್ ಲೈನ್ ಕೆಲಸ ಮಾಡುತ್ತಿದ್ದರು ತಕ್ಷಣ ಜೋರಾಗಿ ಮಳೆ ಶುರುವಾಗಿದೆ. ಕೂಡಲೇ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಹೊಲದಲ್ಲಿದ್ದ ಕುಟುಂಬಸ್ಥರು ತಕ್ಷಣ ಸ್ಥಳಕ್ಕೆ ತೆರಳಿದರು.
ಮೃತ ವ್ಯಕ್ತಿಗೆ ಇಬ್ಬರು ಮಕ್ಕಳು ಇದ್ದಾರೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ ಅವರು ಮೃತ ವ್ಯಕ್ತಿಯ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಕುಟುಂಬಕ್ಕೆ ₹1 ಲಕ್ಷ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಈಗ ಜಿಲ್ಲಾಡಳಿತ ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ನಡೆದ ಅಕ್ರಮಗಳ ತನಿಖೆ ನಿಶ್ಚಿತ