ಜಲ ಜೀವನ್ ಮಿಷನ್ | ಕರ್ನಾಟಕಕ್ಕೆ ಕೇಂದ್ರ ಸರ್ಕಾರ ದ್ರೋಹ ಬಗೆದಿದ್ದು ಹೇಗೆ? ಸಿಎಂ ವಿವರಣೆ

Date:

Advertisements

ಕರ್ನಾಟಕದಲ್ಲಿ ‘ಜಲ ಜೀವನ್ ಮಿಷನ್’ ಅನ್ನು ರಾಜ್ಯದ ಎಲ್ಲ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿ ಈ ಯೋಜನೆಯನ್ನು ಹಾಳುಗೆಡವಲು ಮುಂದಾಗಿರುವಂತಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ ಎಂದು ಎಕ್ಸ್‌ ತಾಣದಲ್ಲಿ ಕೇಂದ್ರದ ಅನ್ಯಾಯದ ಬಗ್ಗೆ ಬರೆದುಕೊಂಡಿದ್ದಾರೆ.

ಜಲಜೀವನ್ ಮಿಷನ್‌ಗೆ ಒಟ್ಟು ಹಂಚಿಕೆ – ₹49,262 ಕೋಟಿ (ಕೇಂದ್ರದ ಪಾಲು – ₹26,119 ಕೋಟಿ, ರಾಜ್ಯದ ಪಾಲು – ₹23,142 ಕೋಟಿ). ಬಿಡುಗಡೆಯಾದ ಒಟ್ಟು ಅನುದಾನ ₹32,202 ಕೋಟಿ. ಇದರಲ್ಲಿ ಕೇಂದ್ರದ ಪಾಲು – ₹11,760 ಕೋಟಿ, ರಾಜ್ಯದ ಪಾಲು – ₹20,442 ಕೋಟಿ. ಅಂದರೆ ಜಲಜೀವನ್ ಮಿಷನ್‌ಗೆ ಶೇ. 45ರಷ್ಟು ಮಾತ್ರ ಕೇಂದ್ರ ಸರಾಕರ ಬದ್ಧತೆ ಹೊಂದಿದೆ. ರಾಜ್ಯ ಸರ್ಕಾರ ಶೇ. 88.3ರಷ್ಟು ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

Advertisements

2024-25ನೇ ಸಾಲಿನ ಬಜೆಟ್‌ನಲ್ಲೂ ಕೇಂದ್ರದ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ಕೇಂದ್ರ ಸರ್ಕಾರವು ಜೆಜೆಎಮ್ ಗೆ ₹3,804 ಕೋಟಿ ಹಂಚಿಕೆ ಮಾಡಿದೆ. ಆದರೆ ಅದರಲ್ಲಿ ₹570 ಕೋಟಿ ಮಾತ್ರ ಬಿಡುಗಡೆಯಾಗಿರುತ್ತದೆ. ಈ ವಿಚಾರವಾಗಿ ಹಲವಾರು ಪತ್ರಗಳನ್ನು ಬರೆದು ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿರುವುದಿಲ್ಲ. ಮತ್ತೊಂದೆಡೆ, ಕರ್ನಾಟಕವು ತನ್ನ ಬಜೆಟ್ ನಲ್ಲಿ ₹7,652 ಕೋಟಿ ಹಂಚಿಕೆ ಮಾಡಿದ್ದು, ₹4,977 ಕೋಟಿ ಹಣವನ್ನು ಬಿಡುಗಡೆ ಮಾಡಿದೆ ಎಂದು ಸಿಎಂ ತಿಳಿಸಿದ್ದಾರೆ.

“ಇದು ಕೇವಲ ಕರ್ನಾಟಕಕ್ಕೆ ಸಂಬಂಧಿಸಿದ್ದು ಮಾತ್ರ ಅಲ್ಲ – ಇದು ದೇಶದ ಎಲ್ಲ ರಾಜ್ಯಗಳಿಗೆ ಮಾಡುತ್ತಿರುವ ಅನ್ಯಾಯ. ಜೆಜೆಎಂ (2024-25) ಗಾಗಿ ಅಂದಾಜು ಬಜೆಟ್ – ₹70,163 ಕೋಟಿ ಪರಿಷ್ಕೃತ ಅಂದಾಜು ಮೊತ್ತವನ್ನು ಕೇವಲ ₹22,694 ಕೋಟಿಗೆ ಇಳಿಸಲಾಗಿದೆ. ಈ ಮೂಲಕ ನರೇಂದ್ರ ಮೋದಿ ಸರ್ಕಾರ ತನ್ನ ಬಜೆಟ್ ನಲ್ಲಿ ಅಗತ್ಯ ಪ್ರಮಾಣದ ಅನುದಾನ ನೀಡದೆ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಕೊಲ್ಲುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿ ಅಂಕಿ ಅಂಶಗಳನ್ನು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

“ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅನ್ಯಾಯವನ್ನು ಪ್ರಶ್ನಿಸಬೇಕಿದ್ದ ಸಚಿವ ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿಯನ್ನು ಹರಡಿ ಕನ್ನಡಿಗರಿಗೆ ದ್ರೋಹ ಎಸಗುತ್ತಿದ್ದಾರೆ. ಈ ರೀತಿ ಜನರನ್ನು ದಾರಿ ತಪ್ಪಿಸುವ ಬದಲು, 2024-25 ಸಾಲಿನ ಬಜೆಟ್‌ನಲ್ಲಿ ಜೆಜೆಎಂಗೆ ಹಂಚಿಕೆಯಾಗಿದ್ದ ಪೂರ್ಣ ಅನುದಾನವನ್ನು ಯಾಕೆ ನೀಡಿಲ್ಲ ಎಂದು ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು” ಎಂದು ಮುಖ್ಯಮಂತ್ರಿಗಳು ಆಗ್ರಹಿಸಿದ್ದಾರೆ.

“ಬಿಜೆಪಿಯ ಇಂತಹ ಕೃತ್ಯಗಳ ಹೊರತಾಗಿಯೂ ಕರ್ನಾಟಕದಲ್ಲಿ ನಮ್ಮ ಸರ್ಕಾರವು ನುಡಿದಂತೆ ನಡೆದು ಉತ್ತಮ ಸಾಧನೆ ಮಾಡಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿದ್ದರೂ, ಜಲ ಜೀವನ್‌ ಮಿಷನ್‌ ಯೋಜನೆಯ ಮುಖಾಂತರ ಪ್ರತಿ ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ನೀಡಲು ಬದ್ಧವಾಗಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X