ʼನಮಸ್ಕಾರ ಬುದ್ಧಿ.. ಏನ್ಲಾ ಹೆಂಗಿದಿ..ʼ ಎನ್ನುವುದು ಗುಲಾಮಗಿರಿ ಮನಸ್ಥಿತಿ ಸಂಕೇತ: ಸಿಎಂ ಸಿದ್ದರಾಮಯ್ಯ

Date:

Advertisements

ಮನುಷ್ಯನಿಗೆ ಜ್ಞಾನ ಇಲ್ಲದೇ ಹೋದರೆ ಸ್ವಾಭಿಮಾನ ಬರಲ್ಲ. ಗುಲಾಮಗಿರಿ ಮನಸ್ಥಿತಿ ಅವರಲ್ಲಿ ಇರುತ್ತದೆ. ʼನಮಸ್ಕಾರ ಬುದ್ಧಿ.. ಏನ್ಲಾ ಹೆಂಗಿದಿ..ʼ ಎನ್ನುವುದು ಗುಲಾಮಗಿರಿ ಮನಸ್ಥಿತಿ ನಡವಳಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಎಂ.ಜಿ.ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಸೋಮವಾರ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಏರ್ಪಡಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಜಗತ್ತಿನಾದ್ಯಂತ ಇಂದು ವಿಶ್ವ ಬಾಲ ಕಾರ್ಮಿಕರ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದೆ. ಸಮಾಜದಲ್ಲಿ ಜಾಗೃತಿ ಮೂಡಿಸುವುದು ಈ ದಿನದ ವಿಶೇಷ. ನಾನು ಮಕ್ಕಳಿಗೆ ಶುಭಾಶಯ ಕೋರುತ್ತೇನೆ. ಯಾರು ಶಿಕ್ಷಣದಿಂದ ವಂಚಿತರಾಗಬಾರದು. ಕಡ್ಡಾಯ ಶಿಕ್ಷಣ ಕೊಡುತ್ತೇವೆ ಎಂದು ನಾವು ಕಾನೂನು ಪ್ರಕಾರ ಒಪ್ಪಿಕೊಂಡಿದ್ದೇವೆ. ಶಿಕ್ಷಣದ ಹಕ್ಕು ಪ್ರತಿಯೊಬ್ಬ ಬಾಲಕರಿಗೂ ಸಿಗಬೇಕು”ಎಂದರು.

Advertisements

“ಬಾಲಕರನ್ನು ದುಡಿಸಿಕೊಳ್ಳುವುದು ಕಾನೂನು ವಿರೋಧಿ ನಡೆ. ಶಿಕ್ಷಾರ್ಹ ಅಪರಾಧ ಕೂಡ. ಆದರೂ ಹೋಟೆಲ್‌, ಶಾಪ್‌ ಬಟ್ಟೆ ಕೈಗಾರಿಕೆಗಳಲ್ಲಿ ಬಾಲ ಕಾರ್ಗಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ. ಇಂತಹ ಪ್ರಕರಣಗಳು ಬೆಳಕಿಗೆ ಬಂದರೆ ಅವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು” ಎಂದರು ಸೂಚಿಸಿದರು.

“ಸಮಾಜದಲ್ಲಿ ಆರ್ಥಿಕ ಅಸಮಾನತೆ ಉಂಟಾಗಲು ಶಿಕ್ಷಣ ಪಡಿಯದೇ ಇರುವುದು ಮೂಲ ಕಾರಣ. ಇದಕ್ಕೆ ಜಾತಿ ವ್ಯವಸ್ಥೆ ಕೂಡ ಮತ್ತೊಂದು ಕಾರಣವಾಗಿದೆ. ಶೂದ್ರರು ಶತಶತಮಾನಗಳಿಂದ ಅವಕಾಶಗಳಿಂದ ವಂಚಿತರಾಗಿದ್ದಾರೆ. ಇದರಲ್ಲಿ ಬಹುಸಂಖ್ಯಾತ ವರ್ಗದ ಮಹಿಳೆಯರು ಕೂಡ ಸೇರಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X