ಉಡುಪಿ | ರಂಗಭೂಮಿ ಜನರನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯುವ ಮಾಧ್ಯಮ – ಮುನೀರ್ ಕಾಟಿಪಳ್ಳ

Date:

Advertisements

ಕರಾವಳಿ ಜನರ ನಗರವಾಸಿಗಳ ಜೀವನ ಬರಡಾಗಿದೆ. ಆಧುನಿಕ ರಂಗಭೂಮಿ ಮತ್ತು ನಾಟಕ ಜನರನ್ನು ಹೊಸ ದಿಕ್ಕಿನ ಕಡೆ ಆಲೋಚಿಸಬಹುದಾದ ಸಶಕ್ತವಾದ ಮಾಧ್ಯಮ ಎಂದು ಪ್ರಗತಿಪರ ಚಿಂತಕ ಹೋರಾಟಗಾರ ಮುನೀರ್ ಕಾಟಿಪಳ್ಳ ಅಭಿಪ್ರಾಯ ಪಟ್ಟರು

ಉಡುಪಿಯ ಎಂ ಜಿ ಎಂ ಕಾಲೇಜಿನಲ್ಲಿ ರಥಬೀದಿ ಗೆಳೆಯರು ಸಂಘಟನೆ ಆಯೋಜಿಸುತ್ತಿರುವ ಮೂರುದಿನಗಳ ಮುರಾರಿ ಕೆದ್ಲಾಯ ರಂಗೋತ್ಸವ ಉದ್ಘಾಟಿಸಿ ಮಾತನಾಡಿದರು.

ನಾಟಕದ ಮೂಲಕ ಸಮಾಜದಲ್ಲಿ ಉತ್ತೇಜನ ಸೃಷ್ಟಿಸುವ ಹೆಚ್ಚಿಸುವ ಕೆಲಸ ಆಗಬೇಕು. ಭಾಷಣ ಸೆಮಿನಾರ್ ಸಂವಾದ ವಿಚಾರ ಸಂಕೀರ್ಣಗಳು ಒಂದು ಕಡೆ ನಡೆಯುತ್ತಿದ್ದರೆ ನಾಟಕ ಬಹಳ ಪರಿಣಾಮಕಾರಿಯಾಗಿ ಜನಾಭಿಪ್ರಾಯವನ್ನು ಸೃಷ್ಟಿಸುವ ಚಳುವಳಿಯ ರೂಪವನ್ನು ಪಡೆಯಬಹುದಾದ ಮಾಧ್ಯಮ ಎಂದರು.

Advertisements

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ್, ಎನ್ ಸಂತೋಷ್ ಬಳ್ಳಾಳ್ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್, ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ನಾಟಕ ವಿಭಾಗದ ಮುಖ್ಯಸ್ಥ ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಪ್ರೊ. ಸುಬ್ರಮಣ್ಯ ಜೋಶಿ ವಂದಿಸಿದರು. ಮೈಸೂರು ಸಂಕಲ್ಪ ತಂಡದ, ಹಿರಿಯ ರಂಗಕರ್ಮಿ ಹುಲುಗಪ್ಪ ಕಟ್ಟಿಮನಿ ನಟಿಸಿ ನಿರ್ದೇಶಿಸಿದ ಜೊತೆಗಿರುವನು ಚಂದಿರ ನಾಟಕ ಮೊದಲ ದಿನ ಪ್ರದರ್ಶನವಾಯ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X