ದೆಹಲಿ ರೈಲ್ವೆ ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ: ಮಕ್ಕಳು ಸೇರಿ 18 ಮಂದಿ ದುರ್ಮರಣ

Date:

Advertisements

ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಭಕ್ತ ಸಮೂಹದ ನಡುವೆ ಮತ್ತೊಂದು ಭೀಕರ ಕಾಲ್ತುಳಿತ ದುರಂತ ಸಂಭವಿಸಿದ್ದು, ಮಕ್ಕಳು, ಮಹಿಳೆಯರು ಸೇರಿ 18 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ನವದೆಹಲಿಯ ರೈಲು ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಉಂಟಾದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿ, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರ ಪೈಕಿ ಬಹುತೇಕ 14 ಮಂದಿ ಮಹಿಳೆಯರು ಎಂದು ಪಿಟಿಐ ವರದಿಯಾಗಿದೆ.

ದೆಹಲಿಯ ಕೇಂದ್ರ ರೈಲು ನಿಲ್ದಾಣದ 14, 15ನೇ ಪ್ಲಾರ್ಟ್​ಫಾರ್ಮ್​ನಲ್ಲಿ ಘಟನೆ ನಡೆದಿದೆ. ಸಾವಿರಾರು ಜನರು ಎರಡೂ ಪ್ಲಾರ್ಟ್​ಫಾರ್ಮ್​ಗಳಲ್ಲಿ ಕಿಕ್ಕಿರಿದು ತುಂಬಿದ್ದರು. ರೈಲು ಹತ್ತಲು ಪ್ರಯತ್ನಿಸುತ್ತಿರುವ ವೇಳೆ ಕಾಲ್ತುಳಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ರಾತ್ರಿ 9.55ರ ಸುಮಾರಿನಲ್ಲಿ ಪ್ರಯಾಗ್​​ರಾಜ್​​ಗೆ ಹೊರಡಬೇಕಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ಎಕ್ಸ್‌ಪ್ರೆಸ್‌ ರೈಲುಗಳ ಪ್ರಯಾಣ ನಿಗದಿತ ಸಮಯಕ್ಕಿಂತ ವಿಳಂಬ ಮಾಡಿದ್ದವು. ಇದರಿಂದ, ನಿಲ್ದಾಣವು ಸಾವಿರಾರು ಭಕ್ತರಿಂದ ತುಂಬಿ ತುಳುಕುತ್ತಿತ್ತು. 12, 13, 14ನೇ ಪ್ಲಾರ್ಟ್​ಫಾರ್ಮ್​ ಮೇಲೆ ನಿಯಂತ್ರಿಸಲಾಗದಷ್ಟು ಪ್ರಮಾಣದಲ್ಲಿ ಜನರು ತುಂಬಿದ್ದರು. ಇನ್ನಷ್ಟು ಭಕ್ತರು ನಿಲ್ದಾಣದೊಳಗೆ ಬರುತ್ತಿರುವಾಗ ಎಸ್ಕಲೇಟರ್​​ ಬಳಿ ಕಾಲ್ತುಳಿತ ಸಂಭವಿಸಿದೆ. ಈ ವೇಳೆ ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಸಾವು ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

Gj2t1xOakAAW9 w

ರೈಲ್ವೆ ಪೊಲೀಸ್ ಉಪ ಆಯುಕ್ತರ ತಿಳಿಸಿದಂತೆ, “ಪ್ರತಿ ಗಂಟೆಗೆ 1,500 ಜನರಲ್ ಟಿಕೆಟ್‌ಗಳು ಮಾರಾಟವಾಗುತ್ತಿತ್ತು. ಇದರಿಂದಾಗಿ ನಿಲ್ದಾಣ ಜನರಿಂದ ಭರ್ತಿಯಾಗಿತ್ತು. ಎರಡು ರೈಲುಗಳು ತಡವಾಗಿ ಬಂದಿದ್ದಕ್ಕೆ ಮೂರು ಪ್ಲಾರ್ಟ್​ಫಾರ್ಮ್​ಗಳು ಜನರಿಂದ ತುಂಬಿದ್ದವು. 14 ಮತ್ತು 16ನೇ ಪ್ಲಾರ್ಟ್​ಫಾರ್ಮ್​ನ ಎಸ್ಕಲೇಟರ್ ಬಳಿ ಕಾಲ್ತುಳಿತ ಸಂಭವಿಸಿದೆ” ಎಂದು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರು ರೋದಿಸುತ್ತಿರುವುದು ರೈಲು ನಿಲ್ದಾಣದಲ್ಲಿ ಮನಕಲುಕುತ್ತಿತ್ತು. ಎಷ್ಟೋ ಜನರು ಟಿಕೆಟ್​ ಕಾಯ್ದಿರಿಸಿದ್ದರೂ, ಭಾರೀ ಜನಸಂದಣಿಯಿಂದಾಗಿ ರೈಲು ಹತ್ತಲೂ ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್​ ಸಿಂಗ್​, ದೆಹಲಿ ಲೆಫ್ಟಿನೆಂಟ್ ಜನರಲ್ ವಿ.ಕೆ. ಸಕ್ಸೇನಾ, ಹಂಗಾಮಿ ಸಿಎಂ ಅತಿಶಿ ಸಂತಾಪ ಸೂಚಿಸಿದ್ದಾರೆ. “ಘಟನೆಯು ತೀವ್ರ ದುಃಖ ತರಿಸಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ಜೊತೆ ನಾವಿರುತ್ತೇವೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ” ಎಂದು ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Gj2t1vMbwAA pOe

“ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಅತ್ಯಂತ ದುಃಖಕರವಾದದ್ದು. ಸಂತ್ರಸ್ತರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ಘಟನೆಯು ರೈಲ್ವೆ ಇಲಾಖೆಯ ವೈಫಲ್ಯ ಮತ್ತು ಸರ್ಕಾರದ ಅಸೂಕ್ಷ್ಮತೆಯನ್ನು ಮತ್ತೊಮ್ಮೆ ಎತ್ತಿ ತೋರಿಸುತ್ತದೆ. ಪ್ರಯಾಗ್‌ರಾಜ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೋಗುತ್ತಿರುವುದನ್ನು ಪರಿಗಣಿಸಿ, ನಿಲ್ದಾಣದಲ್ಲಿ ಉತ್ತಮ ವ್ಯವಸ್ಥೆ ಮಾಡಬೇಕಿತ್ತು. ದುರಾಡಳಿತ ಹಾಗೂ ನಿರ್ಲಕ್ಷ್ಯದಿಂದ ಯಾರೂ ಪ್ರಾಣ ಕಳೆದುಕೊಳ್ಳದಂತೆ ಸರಕಾರ ಮತ್ತು ಆಡಳಿತ ನೋಡಿಕೊಳ್ಳಬೇಕು” ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ಗಂಭೀರ ಗಾಯಗೊಂಡವರಿಗೆ 2.5 ಲಕ್ಷ ಹಾಗೂ ಸಣ್ಣಪುಟ್ಟ ಗಾಯಾಳುಗಳಿಗೆ 1 ಲಕ್ಷ ಪರಿಹಾರ ಧನ ಘೋಷಿಸಿದೆ.

ಕಾಲ್ತುಳಿತದ ಭೀಕರತೆಗೆ ಸಾಕ್ಷಿಯಾದ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಚಪ್ಪಲಿ, ಬಟ್ಟೆಗಳು

ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಚಪ್ಪಲಿ, ಬಟ್ಟೆಗಳು ಕಾಲ್ತುಳಿತದ ಭೀಕರತೆಗೆ ಸಾಕ್ಷಿಯಾಗಿ ನಿಂತಿದೆ.

Gj2t1xyakAA5EGr

ಕಾಲ್ತುಳಿತದ ಘಟನೆ ಸಂಭವಿಸಿದೆ ಎಂದು ಮೊದಲು ಸುದ್ದಿ ಹರಡಿದಾಗ ರೈಲ್ವೆ ಅಧಿಕಾರಿಗಳು ನಿರ್ಲಕ್ಷಿಸಿದ್ದಲ್ಲದೇ, ಅಂತಹ ಯಾವುದೇ ಘಟನೆ ನಡೆದಿಲ್ಲ. ಊಹಾಪೋಹಾವಷ್ಟೇ. ಸುಳ್ಳು ಸುದ್ದಿ ಎಂದು ಸಮಜಾಯಿಷಿ ನೀಡಿದ್ದರು. ಇದು ಈಗ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X