ಶ್ರೇಷ್ಠ ಸಮಾಜ ಸುಧಾರಕ, ಬಂಜಾರ ಸಮುದಾಯದ ಕುಲಗುರು ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸಲಾಯಿತು.
ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಶಾಸಕ ಶ್ರೀನಿವಾಸ್ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವಾರ್ಪಿಸಲಾಯಿತು.
“ಭರತ ಖಂಡದ ಧಾರ್ಮಿಕ ರಾಯಭಾರಿ ಎಂದೇ ಹೆಸರಾದ ಸೇವಾಲಾಲ್ ಮಹಾರಾಜರು ಅನೇಕ ಪವಾಡಗಳ ಮೂಲಕ ಜನಮನ ಗೆದ್ದವರು. ತಮ್ಮ ಲೀಲೆಗಳನ್ನು ಪ್ರದರ್ಶನ ಮಾಡುತ್ತಾ ಜೀವನದುದ್ದಕ್ಕೂ ಬ್ರಹ್ಮಚರ್ಯ ಪಾಲನೆ ಮಾಡಿದವರು. ಇಂದಿಗೂ ಕೂಡ ಜನಮಾನಸದಲ್ಲಿ ಗುರುವಿನ ಸ್ಥಾನ ಪಡೆದಿದ್ದಾರೆ. ಜತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿ ಸತ್ಯ, ಅಹಿಂಸೆ, ತ್ಯಾಗ ಮನೋಭಾವ ಬಿತ್ತಿದ್ದರು” ಎಂದು ಹಾಜರಿದ್ದ ಮುಖಂಡರು ಸ್ಮರಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಬಿಜೆಪಿ ಮೂರು ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಆದೇಶ : ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ ಮರಡಗಿ, ಮಂಜು ಗೊರಣ್ಣನವರ, ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ, ಉಪಾಧ್ಯಕ್ಷೆ ವೀಣಾ ಗುಡಿ, ಮಾಜಿ ಅಧ್ಯಕ್ಷ ನಾಗಪ್ಪ ಸವದತ್ತಿ, ಸದಸ್ಯರಾದ ಗಂಗೂಬಾಯಿ ನಿಂಗೋಜಿ, ಶಂಶಿಯಾ ಬಾಳೂರ, ಸುರೇಶ ನಾಗಣ್ಣನವರ, ಗೌಸ್‌ಮೋದೀನ್ ತಾಂಡೂರ, ಮಾಲತೇಶ ಕಾಳೇರ, ಮಾರ್ಕಂಡಪ್ಪ ಮಣ್ಣಮ್ಮನವರ, ಜಗದೀಶ ಹರಿಜನ, ನಾಗರಾಜ ಲಮಾಣಿ, ಕರಬಸಪ್ಪ ಹರಿಜನ ಇತರರಿದ್ದರು.
