ಉಡುಪಿ | ಲಿಂಗ ಅಸಮಾನತೆಯನ್ನು ಹೋಗಲಾಡಿಸುವುದೇ ಸರ್ಕಾರದ ಉದ್ದೇಶ – ಸಂಸದ ಕೋಟಾ ಶ್ರೀನಿವಾಸ ಪೂಜಾರಿ

Date:

Advertisements

ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯನ್ನು ಹೋಗಲಾಡಿಸುವ ಉದ್ಧೇಶದಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ (ಮಗಳನ್ನು ಉಳಿಸಿ ಮಗಳನ್ನು ಓದಿಸಿ) ಯೋಜನೆಯು 10 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಪೂರಕವಾದ ಕಾನೂನು ಅರಿವು ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ 1976 ಕುರಿತ ಜಿಲ್ಲಾ ಮಟ್ಟ, ತಾಲೂಕು ಮಟ್ಟ ಹಾಗೂ ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾದ ಜಿಲ್ಲಾಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯೆಯನ್ನು ಹೋಗಲಾಡಿಸಲು ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳ ಹಿಂದೆ ಬೇಟಿ ಬಚಾವೋ ಬೇಟಿ ಪಡಾವೋ ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಮುಖ್ಯ ಉದ್ದೇಶ ಹೆಣ್ಣು ಭ್ರೂಣ ಹತ್ಯೆಯನ್ನು ಹೋಗಲಾಡಿಸುವುದು, ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಅವರುಗಳಿಗೆ ಒದಗಿಸಿ, ಗೌರಯುತವಾಗಿ ಅವರು ಜೀವನ ನಡೆಸುವಂತೆ ಮಾಡುವುದರೊಂದಿಗೆ ಗಂಡು-ಹೆಣ್ಣು ಸಮತೋಲನ ಕಾಯ್ದುಕೊಳ್ಳುವುದಾಗಿರುತ್ತದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

Advertisements

ಜೀತ ಪದ್ಧತಿಯು ಅಮಾನವೀಯ ಪದ್ಧತಿಯಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಜಿಲ್ಲೆಯು ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆ, ಭ್ರೂಣಹತ್ಯೆ, ಜೀತಪದ್ಧತಿ, ಮೂಢನಂಬಿಕೆಗಳಂತಹ ಪ್ರಕರಣಗಳು ಜಿಲ್ಲೆಯಲ್ಲಿ ಕಂಡುಬಂದಿರುವುದಿಲ್ಲ. ಸಾಮಾಜಿಕ ಪಿಡುಗಾದ ಜೀತ ಪದ್ಧತಿಯನ್ನು ನಾಗರಿಕ ಸಮಾಜದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಹಾಗೂ ಮನುಷ್ಯನು ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಲು ಸಂಬAಧಪಟ್ಟ ಅನುಷ್ಠಾನಾಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಜೀತ ಪದ್ಧತಿ ರದ್ಧತಿ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಇಂದಿಗೂ ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಜಿಲ್ಲೆಯಲ್ಲಿ ಸದಸ್ಯ ಪರಿಸ್ಥಿತಿಯು ಆಶಾದಾಯಕವಾಗಿದೆ. ಹೆಣ್ಣು ಮಕ್ಕಳು ಹುಟ್ಟುವುದೇ ಬೇಡ, ಅವರು ಹೊರೆಯಾಗುತ್ತಾರೆ ಎಂದು ಭಾವಿಸದೇ ಗಂಡು ಮಕ್ಕಳಿಗೆ ಸರಿಸಮಾನವಾಗಿ ಹೆಣ್ಣು ಮಕ್ಕಳನ್ನು ಬೆಳೆಸಬೇಕು. ಹೆಣ್ಣು ಮಕ್ಕಳಿಗೆ ಅನುಕಂಪ ತೋರದೇ ಅವರುಗಳಿಗೆ ಎಲ್ಲಾ ಕ್ಷೇತ್ರಗಳಿಯೂ ಅವಕಾಶ ನೀಡುವುದರೊಂದಿಗೆ ಸಮಾನತೆ ಕಲ್ಪಿಸಬೇಕು. ಅದರಲ್ಲೂ ಗ್ರಾಮೀಣ ಹಾಗೂ ತಳ ಸಮುದಾಯದ ಹೆಣ್ಣು ಮಕ್ಕಳು ಸಮಾಜದ ಮುನ್ನೆಲೆಗೆ ಬರಬೇಕು. ಶಿಕ್ಷಣ ದೊರಕಿದ್ದಲ್ಲಿ ಸಮಾನ ಅವಕಾಶ ದೊರಕಲು ಸಾಧ್ಯ ಎಂದ ಅವರು, ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜೀತ ಪದ್ಧತಿಯು ಸಾಮಾಜಿಕ ಅನಿಷ್ಠ ಪದ್ಧತಿಯಾಗಿದ್ದು, ತಳಮಟ್ಟದ ಜನರಿಗೆ ಈ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಸಂಪೂರ್ಣವಾಗಿ ಅನಿಷ್ಠ ಪದ್ಧತಿಯನ್ನು ತೊಲಗಿಸಲು ಕ್ರಮಕೈಗೊಳ್ಳಬೇಕು. ಪಟಾಕಿ ತಯಾರಿಕೆ, ಕಲ್ಲುಕೋರೆ ಸೇರಿದಂತೆ ಮತ್ತಿತರ ಕಡೆ ಅಪಾಯಕಾರಿ ಕೆಲಸದಲ್ಲಿ ಚಿಕ್ಕಮಕ್ಕಳನ್ನು ನಿಯೋಜಿಸುವುದು ಕಾನೂನು ಬಾಹಿರ ಅಪರಾಧವಾಗಿದ್ದು, ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸಲು, ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಡಬೇಕು ಎಂದರು.

ಕರ್ತವ್ಯದ ಸಂದರ್ಭದಲ್ಲಿ ಹೆಣ್ಣು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಿ ಅವರುಗಳಿಗೆ ರಕ್ಷಣೆ ನೀಡುವ ಉದ್ದೇಶದಿಂದ ಹತ್ತು ಜನ ಮೇಲ್ಪಟ್ಟ ಉದ್ಯೋಗಿಗಳಿರುವ ಸರ್ಕಾರಿ ಹಾಗೂ ಖಾಸಗಿ ಕಚೇರಿ, ಫ್ಯಾಕ್ಟರಿ, ಕೈಗಾರಿಕಾ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಯನ್ನು ತೆರೆಯಲು ಈಗಾಗಲೇ ಸೂಚನೆ ನೀಡಲಾಗಿದೆ. ಎಲ್ಲಾ ಕಚೇರಿಗಳು ಹಾಗೂ ಸಂಸ್ಥೆಗಳಲ್ಲಿ ಇದನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು ಎಂದ ಅವರು, ಹತ್ತಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಕಚೇರಿಗಳ ಮಹಿಳೆಯರ ನೆರವಿಗಾಗಿ ಸ್ಥಳೀಯ ದೂರು ಸಮಿತಿಯನ್ನು ರಚಿಸಲಾಗಿದ್ದು, ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದರು.

ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯದ ನಿದೇಶಕಿ ನಿರ್ಮಲಾ ಕುಮಾರಿ, ನ್ಯಾಯವಾದಿ ಪ್ರದೀಪ್ ಪಿ.ಜೆ ಹಾಗೂ ಉಪ ಕಾನೂನು ನೆರವು ಅಭಿರಕ್ಷಕ ಶ್ರೀನಿವಾಸ ಉಪಾಧ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಪೊಲೀಸ್ ನಿರೀಕ್ಷಕ ಡಾ.ಡಿ.ಟಿ ಪ್ರಭು, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮ್ಮದ್, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ದೀಪಾ ನಿರೂಪಿಸಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X