ಉಡುಪಿ | ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಈಗಲೂ ಅವಕಾಶ : ಡಿಸಿ ಡಾ. ಕೆ ವಿದ್ಯಾಕುಮಾರಿ

Date:

Advertisements

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾಜಾಥಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಈಗಲೂ ಸಹ ಈ ಯೋಜನೆಗಳ ಲಾಭ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲೆಯಾದ್ಯಂತ ಸಂಚರಿಸಿ, ಮಾಹಿತಿ ನೀಡಲಿರುವ ಕಲಾಜಾಥಾ ವಾಹನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮೀ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಬಹುತೇಕ ಜನರು ಒಂದಲ್ಲಾ ಒಂದು ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಇದ್ದಾರೆ. ಜಿಲ್ಲೆಯ ಅರ್ಹ ಪ್ರತಿಯೊಬ್ಬರಿಗೂ ಯೋಜನೆಯನ್ನು ತಲುಪಿಸುವ ಉದ್ದೇಶದಿಂದ ಕಲಾಜಾಥದ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಕಾಲಮಿತಿ ಇರುವುದಿಲ್ಲ. ಅರ್ಹರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲೆಯಾದ್ಯಂತ ಕಲಾಜಾಥಾ ವಾಹನವು ಸಂಚರಿಸಿ, ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಿದೆ. ಈಗಾಗಲೇ ರಾಜ್ಯಾದ್ಯಂತ ಪಂಚ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅನುಷ್ಠಾನಗೊಳಿಸಿದೆ. ಇದು ಸಾಮಾನ್ಯರಿಗೂ ತಲುಪಬೇಕೆಂಬುದು ಇದರ ಉದ್ದೇಶ. ಪಂಚ ಗ್ಯಾರಂಟಿಗಳ ಯೋಜನೆಯಿಂದ ಯಾರಾದರೂ ಬಿಟ್ಟು ಹೋದಲ್ಲಿ ಮಾಹಿತಿ ಪಡೆದು, ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಸೂಕ್ತ ರೀತಿಯಲ್ಲಿ ಜನಸಾಮಾನ್ಯರು ಉಪಯೋಗಮಾಡಿಕೊಳ್ಳಬೇಕು. ಶಕ್ತಿ ಯೋಜನೆಯಡಿ ಹೆಣ್ಣು ಮಕ್ಕಳು ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಉಚಿತವಾಗಿ ಸಂಚರಿಸುವಾಗ ಅಗತ್ಯವಿದ್ದಾಗ ಮಾತ್ರ ಬಳಸಬೇಕು. ಅನಗತ್ಯವಾಗಿ ಸಂಚಾರ ಮಾಡುವುದು ಸೂಕ್ತವಲ್ಲ ಎಂದ ಅವರು, ಅದೇ ರೀತಿ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ಚ್ಛಕ್ತಿ ಸೌಲಭ್ಯವನ್ನು ಅನಗತ್ಯವಾಗಿ ಲೈಟ್‌ಗಳನ್ನು ಬಳಸುವುದು, ಮತ್ತಿತರ ವಿದ್ಯುತ್ ಸಲಕರಣೆಗಳನ್ನು ಬಳಸಬಾರದು. ಅಗತ್ಯಕ್ಕೆ ಅನುಸಾರವಾಗಿ ಮಾತ್ರ ಉಪಯೋಗ ಮಾಡಿಕೊಂಡಾಗ ಈ ಯೋಜನೆಗಳ ಪ್ರಯೋಜನವು ಮತ್ತಷ್ಟು ಜನರಿಗೆ ದೊರಕಿದಂತಾಗುತ್ತದೆ ಎಂದರು.

Advertisements

ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೆಶ್ ಕಾಂಚನ್ ಮಾತನಾಡಿ, ರಾಜ್ಯದ ಬಹುಪಾಲು ಜನರ ಬದುಕಿಗೆ ಆಧಾರವಾಗಿರುವ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಯೋಜನೆಗಳು ತಲುಪಬೇಕು. ಈ ಎಲ್ಲಾ ಯೋಜನೆಗಳು ಮಹಿಳೆಯರ ಪಾಲಿಗೆ ವರದಾನವಾಗಿವೆ ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಲಾವಿದರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಲಾಜಾಥಾ ಅಂಗವಾಗಿ ಜಿಲ್ಲೆಯ ವಿವಿಧ ಭಾಗಗಳಿಗೆ ಪ್ರಚಾರ ವಾಹನ ಹಾಗೂ ಕ್ಷೇತ್ರ ಪ್ರಚಾರ ಕಲಾ ತಂಡಗಳು ತೆರಳಿ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X