‘ಲವ್ ಜಿಹಾದ್’ ವಿರುದ್ಧದ ಕಾನೂನಿಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ವಿರೋಧ

Date:

Advertisements

‘ಲವ್ ಜಿಹಾದ್ʼ ವಿರುದ್ಧ ಕಾನೂನು ರೂಪಿಸುವ ಮಹಾರಾಷ್ಟ್ರ ಸರಕಾರದ ಕ್ರಮಕ್ಕೆ ಎನ್‌ಡಿಎ ಮೈತ್ರಿಪಕ್ಷದ ನಾಯಕ, ಕೇಂದ್ರ ಸಚಿವ ರಾಮದಾಸ್ ಅಠಾವಳೆ ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರನ್ನು ಸಮಾನರು ಎಂದು ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ರಾಜ್ಯ ಸರಕಾರ ಇತ್ತೀಚೆಗೆ ನಿರ್ಣಯವನ್ನು ಹೊರಡಿಸಿದ್ದು, ಇತರ ರಾಜ್ಯಗಳಲ್ಲಿನ ಕಾನೂನುಗಳನ್ನು ಅಧ್ಯಯನ ಮಾಡಿ ಶಾಸನವನ್ನು ಶಿಫಾರಸು ಮಾಡಲು ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ನೇತೃತ್ವದ ಸಮಿತಿಯನ್ನು ರಚಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ನೇತೃತ್ವದ ಎನ್‌ಡಿಎಯ ಭಾಗವಾಗಿರುವ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಮುಖ್ಯಸ್ಥ ಸಚಿವ ರಾಮದಾಸ್ ಅಠಾವಳೆ, ಅಂತರ್ಧರ್ಮೀಯ ವಿವಾಹಗಳಿಗೆ ʼಲವ್ ಜಿಹಾದ್ʼ ಎಂಬ ಹಣೆಪಟ್ಟಿ ಕಟ್ಟಬಾರದು. ಆದರೆ, ಬಲವಂತದ ಮತಾಂತರವನ್ನು ತಡೆಯಬೇಕು. ʼಲವ್ ಜಿಹಾದ್ʼ ಎಂದು ಕರೆಯುವುದು ತಪ್ಪು, ಮತಾಂತರ ತಡೆಯಲು ಕ್ರಮಕೈಗೊಳ್ಳಬೇಕು. ಸಾಮಾಜಿಕ ಮತ್ತು ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಮರ್ಥಿಸಿಕೊಂಡ ರಾಮದಾಸ್ ಅಠವಳೆ, ಅವರು ಎಲ್ಲ ಸಮುದಾಯಗಳಲ್ಲಿ ಸಮಾನತೆ ಮತ್ತು ಕಲ್ಯಾಣ ಕ್ರಮಗಳನ್ನು ಪ್ರಾರಂಭಿಸಿದ್ದಾರೆ. ಮುಸ್ಲಿಮರು ಕೂಡ ಅದರ ಪ್ರಯೋಜನ ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X