ಭದ್ರಾ ನದಿಯಲ್ಲಿ ಈಜಲು ಹೋಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಗಡಿಗೇಶ್ವರದಲ್ಲಿ ಭಾನುವಾರ ನಡೆದಿದೆ. ಜಲಾಲ್ (25) ಮೃತ ಯುವಕ
ಭದ್ರಾ ನದಿಗೆ ಭಾನುವಾರ ಸಂಜೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದ್ದು, ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗದ ಕಾರಣ ಯುವಕ ಮೃತಪಟ್ಟಿದ್ದಾನೆ.
ಘಟನೆ ಕುರಿತು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಸೋಮವಾರ ಮುಳುಗು ತಜ್ಞರು ಮತ್ತು ಅಗ್ನಿಶಾಮಕದಳದಿಂದ ಶೋಧ ಕಾರ್ಯಾಚರಣೆ ಪುನರಾರಂಭಗೊಂಡಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸರ್ವೇ ಅಧಿಕಾರಿ ಆತ್ಮಹತ್ಯೆ
ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
